ದೇಶ- ವಿದೇಶ

ಡೆಹ್ರಾಡೂನ್:‌ ಬಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ

ಡೆಹ್ರಾಡೂನ್: ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕಾವಿನ ನಡುವೆಯೇ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ.

ಡೆಹ್ರಾಡೂನ್‍ನ ಅಂತಾರಾಜ್ಯ ಬಸ್ ನಲ್ಲಿ ಹೊರಟಿದ್ದ ಅಪ್ರಾಪ್ತ ಬಾಲಕಿ ಮೇಲೆ ಐವರು ನೀಚರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆ.13ರಂದು ನಡೆದಿದೆ. ಈ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ನಡುರಾತ್ರಿ ಯುವತಿಯೊಬ್ಬಳು ಬಸ್‍ಸ್ಟ್ಯಾಂಡ್‍ನಲ್ಲಿ ಕುಳಿತಿರುವ ಬಗ್ಗೆ ಡೆಹ್ರಾಡೂನ್ ಮಕ್ಕಳ ಕಲ್ಯಾಣ ಸಮಿತಿಗೆ ಕರೆಯೊಂದು ಬಂದಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿ ಯುವತಿಯನ್ನು ಸರ್ಕಾರಿ ಹೋಂಗೆ ಕಳುಹಿಸಿ ವಿಚಾರಣೆ ನಡೆಸಿದಾಗ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಹೇಳಿಕೊಂಡಿದ್ದಾಳೆ.

ಬಸ್‌ ಸಿಬ್ಬಂದಿ ಅಪ್ರಾಪ್ತ ಬಾಲಕಿಯನ್ನು ದೆಹಲಿಯಿಂದ ಡೆಹ್ರಾಡೂನ್‌ಗೆ ಕರೆತಂದಿದ್ದರು. ಇಬ್ಬರು ಬಸ್‌ ಚಾಲಕರು, ಕಂಡಕ್ಟರ್, ಕ್ಯಾಶಿಯರ್ ಹಾಗೂ ಇತರ ಇಬ್ಬರು ಚಾಲಕರು ಸೇರಿ ಅದೇ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಡೆಹ್ರಾಡೂನ್‌ ಎಸ್‌ಎಸ್‌ಪಿ ಅಜಯ್‌ಸಿಂಗ್‌ ತಿಳಿಸಿದ್ದಾರೆ.

ಎಲ್ಲಾ ಐವರು ಆರೋಪಿಗಳಾದ ಧರ್ಮೇಂದ್ರ ಕುಮಾರ್(32), ರಾಜ್‍ಪಾಲ್(57), ದೇವೇಂದ್ರ (52), ರಾಜೇಶ್ ಕುಮಾರ್ ಸೋನಕ್(38), ಹಾಗೂ ರವಿಕುಮಾರ್(34)ನನ್ನು ಪೋಲಿಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಕೃತ್ಯ ನಡೆಸಿರುವುದನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಘಟನೆ ಹಿನ್ನೆಲೆ:
ಯುವತಿ ಪಂಜಾಬ್‍ಗೆ ಹೇಗೆ ಹೋಗಬೇಕೆಂದು ಬಸ್ ಚಾಲಕ ದೇವೇಂದ್ರನ ಬಳಿಕ ಕೇಳಿದ್ದಳು. ಈ ವೇಳೆ ಡೆಹ್ರಾಡೂನ್‍ಗೆ ಬಂದು ಅಲ್ಲಿಂದ ಬಸ್‍ನಲ್ಲಿ ಹೋಗಬಹುದೆಂದು ಯುವತಿಗೆ ಚಾಲಕ ಹೇಳಿದ್ದಾನೆ. ಡೆಹ್ರಾಡೂನ್ ತಲುಪುವ ಮೊದಲೇ ಎಲ್ಲಾ ಬಸ್ ಪ್ರಯಾಣಿಕರು ಇಳಿದ ಕಾರಣ ಬಸ್ ಖಾಲಿಯಾಗಿತ್ತು. ಯುವತಿ ಒಬ್ಬಳೇ ಇದ್ದಳು. ಟರ್ಮಿನಲ್ ತಲುಪುತ್ತಿದ್ದಂತೆ ದೇವೇಂದ್ರ ಮತ್ತು ಧರ್ಮೇಂದ್ರ ಬಸ್‍ನ್ನು ಪಾರ್ಕ್ ಮಾಡಿ ಆಕೆ ಮೇಲೆ ಅತ್ಯಾಚಾರ ಎಸಗಿ ಕ್ರೌರ್ಯ ಮೆರೆದಿದ್ದಾರೆ.

ಇದಾದ ಬಳಿಕ ರವಿ ಮತ್ತು ರಾಜ್‍ಪಾಲ್ ಕೂಡ ಆಕೆಯನ್ನು ಅತ್ಯಾಚಾರ ಮಾಡಿದ್ದಾರೆ.  ವಿಷಯ ತಿಳಿದು ಸ್ಥಳಕ್ಕೆ ಬಂದ ಕ್ಯಾಶಿಯರ್ ಕೂಡ ನೀಚರ ಜೊತೆ ಸೇರಿ ಅತ್ಯಾಚಾರ ಮಾಡಿ ಅಟ್ಟಹಾಸ ಮೆರೆದಿದ್ದಾನೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

10 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

14 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago