ನವದೆಹಲಿ: ದೇಶದ ಲಘು ಯುದ್ಧ ವಿಮಾನ ಎಂಕೆ-1A ಉತ್ಪಾದನೆ ಹಾಗೂ ಸೇರ್ಪಡೆಯಲ್ಲಿನ ವಿಳಂಬವನ್ನು ಪರಿಹಾರ ಮಾಡಲು ರಕ್ಷಣಾ ಸಚಿವಾಲಯವು ಉನ್ನತ ಮಟ್ಟದ ಸಮಿತಿಯನ್ನು ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ರಚಿಸಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ವಾಯುಪಡೆಯ ಮುಖ್ಯಸ್ಥ ಎಪಿ ಸಿಂಗ್ ಅವರು ಎಲ್‌ಸಿಎ ವಿಮಾನಗಳ ವಿತರಣೆಯಲ್ಲಿನ ವಿಳಂಬದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಿತಿ ರಚಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ಇನ್ನು ಉನ್ನತ ಮಟ್ಟದ ಸಮಿತಿಯೂ ಎಲ್‌ಸಿಎ ಉತ್ಪಾದನೆಯಲ್ಲಿನ ಆಡಚಣೆಗಳನ್ನು ಗುರುತಿಸುವ ಹಾಗೂ ಉತ್ಪಾದನೆಯನ್ನು ವೇಗಗೊಳಿಸಲು ಕ್ರಮಗಳನ್ನು ಶಿಫಾರಸ್ಸು ಮಾಡುವ ಕಾರ್ಯಗಳನ್ನು ವಹಿಸಿಕೊಂಡಿದೆ. ಅಲ್ಲದೇ ಸಮಿತಿಯೂ ತನ್ನ ವರದಿಯನ್ನು ಸಲ್ಲಿಸಲು ಒಂದು ತಿಂಗಳು ಕಾಲಾವಕಾಶವನ್ನು ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.





