ನವದೆಹಲಿ: ದೇಶದ ಲಘು ಯುದ್ಧ ವಿಮಾನ ಎಂಕೆ-1A ಉತ್ಪಾದನೆ ಹಾಗೂ ಸೇರ್ಪಡೆಯಲ್ಲಿನ ವಿಳಂಬವನ್ನು ಪರಿಹಾರ ಮಾಡಲು ರಕ್ಷಣಾ ಸಚಿವಾಲಯವು ಉನ್ನತ ಮಟ್ಟದ ಸಮಿತಿಯನ್ನು ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ರಚಿಸಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ವಾಯುಪಡೆಯ ಮುಖ್ಯಸ್ಥ ಎಪಿ ಸಿಂಗ್ ಅವರು ಎಲ್‌ಸಿಎ ವಿಮಾನಗಳ ವಿತರಣೆಯಲ್ಲಿನ ವಿಳಂಬದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಿತಿ ರಚಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ಇನ್ನು ಉನ್ನತ ಮಟ್ಟದ ಸಮಿತಿಯೂ ಎಲ್‌ಸಿಎ ಉತ್ಪಾದನೆಯಲ್ಲಿನ ಆಡಚಣೆಗಳನ್ನು ಗುರುತಿಸುವ ಹಾಗೂ ಉತ್ಪಾದನೆಯನ್ನು ವೇಗಗೊಳಿಸಲು ಕ್ರಮಗಳನ್ನು ಶಿಫಾರಸ್ಸು ಮಾಡುವ ಕಾರ್ಯಗಳನ್ನು ವಹಿಸಿಕೊಂಡಿದೆ. ಅಲ್ಲದೇ ಸಮಿತಿಯೂ ತನ್ನ ವರದಿಯನ್ನು ಸಲ್ಲಿಸಲು ಒಂದು ತಿಂಗಳು ಕಾಲಾವಕಾಶವನ್ನು ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಂಧ್ರಪ್ರದೇಶ: ಆರ್ಥಿಕ ಲಾಭಕ್ಕಾಗಿ ತಮ್ಮ ಚಲನಚಿತ್ರಗಳನ್ನು ಹಿಂದಿಗೆ ಭಾಷಾಂತರ ಮಾಡಲು ಅವಕಾಶ ನೀಡುವ ತಮಿಳುನಾಡಿನ ರಾಜಕಾರಣಿಗಳು ಹಿಂದಿ ಭಾಷೆಯನ್ನು ಏಕೆ…
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಬಗ್ಗೆ ತನಿಖೆ ನಡೆಯುತ್ತಿದ್ದು, ಇದಕ್ಕಾಗಿಯೇ ವಿಶೇಷ ಸಮಿತಿಯೊಂದನ್ನು ರಚನೆ ಮಾಡಲಾಗಿದೆ…
ಕೊಳ್ಳೇಗಾಲ: ಮಾವನಿಂದ ದೈಹಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ…
ಬೆಂಗಳೂರು: ನಟಿ ರನ್ಯಾರಾವ್ ಅವರನ್ನು ಗೋಲ್ಟ್ ಸ್ಮಗ್ಲಿಂಗ್ ಕೇಸ್ನಲ್ಲಿ ಡಿಆರ್ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ…
ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ…
ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿಧಾನಸಭೆ ಉಪಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು…