ದೇಶ- ವಿದೇಶ

ಶಂಕಿತ ಮಂಕಿಪಾಲ್ಸ್‌ ವೈರಸ್‌ ಸೋಂಕಿತರ ಚಿಕಿತ್ಸೆಗೆ ಪ್ರೋಟೋಕಾಲ್‌ ಬಿಡುಗಡೆ

ನವದೆಹಲಿ: ಜಾಗತಿಕವಾಗಿ ಮಂಕಿಪಾಲ್ಸ್‌ ಪ್ರಕರಣಗಳ ಉಲ್ಬಣದ ನಡುವೆ ದೆಹಲಿಯ ಏಮ್ಸ್‌ ಆಸ್ಪತ್ರೆಯು ಪ್ರೋಟೋಕಾಲ್‌ ಬಿಡುಗಡೆ ಮಾಡಿದೆ.

ಶಂಖಿತ ಮಂಕಿಪಾಲ್ಸ್‌ ಹೊಂದಿರುವ ರೋಗಿಗಳನ್ನು ನಿರ್ವಹಿಸಲು ಏಮ್ಸ್‌ ಆಸ್ಪತ್ರೆ ಪ್ರೋಟೋಕಾಲ್‌ ಬಿಡುಗಡೆ ಮಾಡಿದ್ದು, ಮಂಕಿಪಾಲ್ಸ್‌ ಹರಡದಂತೆ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಮಂಕಿಪಾಲ್ಸ್‌ ಒಂದು ವೈರಲ್‌ ಝೂನೋಸಿಸ್‌ ಆಗಿದ್ದು, ಸಿಡುಬು ರೋಗಿಗಳಲ್ಲಿ ಈ ಹಿಂದೆ ಕಂಡುಬರುವ ರೋಗಲಕ್ಷಣಗಳನ್ನು ಹೋಲುತ್ತದೆ. ಆದರೂ ಪ್ರಾಯೋಗಿಕವಾಗಿ ಇದು ಕಡಿಮೆ ತೀವ್ರವಾಗಿರುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಮಂಕಿಪಾಲ್ಸ್‌ನ್ನು ಅಂತರಾಷ್ಟ್ರೀಯ ಕಾಳಜಿವ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದೆ.

ಈ ಹಿಂದೆ ಮಂಕಿಪಾಲ್ಸ್‌ ಎಂದು ಕರೆಯಲ್ಪಡುವ ಎಂಪಾಕ್ಸ್‌ ಒಂದು ವೈರಲ್‌ ಕಾಯಿಲೆಯಾಗಿದ್ದು, ಅದು ಜ್ವರ, ತಲೆನೋವು ಹಾಗೂ ಸ್ನಾಯು ನೋವುಗಳನ್ನು ಉಂಟು ಮಾಡುತ್ತದೆ. ಇದರ ಜೊತೆಗೆ ಚರ್ಮದ ಮೇಲೆ ನೋವಿನ ಗುಳ್ಳೆಗಳನ್ನು ಉಂಟುಮಾಡುತ್ತದೆ. ಇದು ನಿಕಟವಾದ ಚರ್ಮದಿಂದ ಚರ್ಮದ ಸಂಪರ್ಕದ ಮೂಲಕ ವ್ಯಕ್ತಿಯಿಂದ ವ್ಯಕ್ತಿಗ ಹರಡುತ್ತದೆ.

ಈ ಹಿನ್ನೆಲೆಯಲ್ಲಿ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರೋಗ ಲಕ್ಷಣ ಕಂಡು ಬಂದರೆ ಕೂಡಲೇ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

18 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

23 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

27 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago