ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗದ್ದುಗೆ ಏರಲು ಸಜ್ಜಾಗಿದ್ದರೆ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಈಗ ಬಿಗ್‌ಶಾಕ್ ಎದುರಾಗಿದೆ.
ಫೆಬ್ರವರಿ.5ರಂದು ನಡೆದಿದ್ದ ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಪಕ್ಷ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 25 ಕ್ಷೇತ್ರಗಳಲ್ಲಿ ಎಎಪಿ ಪಕ್ಷ ಜಯಗಳಿಸಿದ್ದು, ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳು ಖಾತೆಯನ್ನೇ ತೆರೆಯದೇ ಭಾರೀ ಮುಖಭಂಗ ಅನುಭವಿಸಿದೆ. ಹೀಗಾಗಿ ಬಿಜೆಪಿಯೂ ದೆಹಲಿಯಲ್ಲಿ ಅಧಿಕಾರವನ್ನು ಸ್ಥಾಪಿಸಲು ತುದಿಗಾಲಿನಲ್ಲಿ ನಿಂತಿದೆ.
ಇನ್ನೂ ಈ ಚುನಾವಣಾ ಫಲಿತಾಂಶದಿಂದ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಬಿಜೆಪಿಯಲ್ಲಿ ಯಾರು ಸಿಎಂ ಸ್ಥಾನ ಅಲಂಕರಿಸಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ.





