ದೇಶ- ವಿದೇಶ

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ: ದೆಹಲಿಗೆ ಗದ್ದುಗೆ ಏರಲು ಬಿಜೆಪಿ ಸಜ್ಜು

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗದ್ದುಗೆ ಏರಲು ಸಜ್ಜಾಗಿದ್ದರೆ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಈಗ ಬಿಗ್‌ಶಾಕ್‌ ಎದುರಾಗಿದೆ.

ಫೆಬ್ರವರಿ.5ರಂದು ನಡೆದಿದ್ದ ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಪಕ್ಷ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 25 ಕ್ಷೇತ್ರಗಳಲ್ಲಿ ಎಎಪಿ ಪಕ್ಷ ಜಯಗಳಿಸಿದ್ದು, ಕಾಂಗ್ರೆಸ್‌ ಹಾಗೂ ಇತರೆ ಪಕ್ಷಗಳು ಖಾತೆಯನ್ನೇ ತೆರೆಯದೇ ಭಾರೀ ಮುಖಭಂಗ ಅನುಭವಿಸಿದೆ. ಹೀಗಾಗಿ ಬಿಜೆಪಿಯೂ ದೆಹಲಿಯಲ್ಲಿ ಅಧಿಕಾರವನ್ನು ಸ್ಥಾಪಿಸಲು ತುದಿಗಾಲಿನಲ್ಲಿ ನಿಂತಿದೆ.

ಇನ್ನೂ ಈ ಚುನಾವಣಾ ಫಲಿತಾಂಶದಿಂದ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಬಿಜೆಪಿಯಲ್ಲಿ ಯಾರು ಸಿಎಂ ಸ್ಥಾನ ಅಲಂಕರಿಸಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ.

ಅರ್ಚನ ಎಸ್‌ ಎಸ್

Recent Posts

ನೇಪಾಳದಲ್ಲಿ ಭಾರೀ ಹಿಮಪಾತ: ಸಂಕಷ್ಟದಲ್ಲಿ ಆರು ಮಂದಿ ಭಾರತೀಯರು

ಕಠ್ಮಂಡು: ನೇಪಾಳದಲ್ಲಿ ಭಾರೀ ಹಿಮಪಾತದಿಂದಾಗಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಭಾರತೀಯ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ…

47 mins ago

ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ಮುರುಸು ಚಂಡಮಾರುತ: ಮೂರು ರಾಜ್ಯಗಳಲ್ಲಿ ಹೈಅಲರ್ಟ್‌

ವಿಶಾಖಪಟ್ಟಣ: ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾದಲ್ಲಿ ಚಂಡಮಾರುತದ ಆತಂಕ ಎದುರಾಗಿದೆ. ನವೆಂಬರ್‌ 3ರ ಮುಂಜಾನೆ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ…

2 hours ago

ನನ್ನ ವಿರುದ್ಧ ಇಡಿ–ಐಟಿ ದಾಳಿಗೆ ಒತ್ತಡ: ಪ್ರಿಯಾಂಕ್‌ ಖರ್ಗೆ ಆರೋಪ

ಬೆಂಗಳೂರು: ತಮ್ಮ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳ ವಿರುದ್ಧ ಇಡಿ ಮತ್ತು ಐಟಿ ದಾಳಿ ನಡೆಸಲು ಕೇಂದ್ರ ಸಚಿವರೊಬ್ಬರು ಒತ್ತಡ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ನವೆಂಬರ್.6ರಿಂದ ಮಾದಪ್ಪನ ದೀಪಾವಳಿ ಜಾತ್ರಾ ಮಹೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ಲಕ್ಷಾಂತರ ಭಕ್ತರ ಆರಾಧ್ಯ ದೈವವಾದ…

3 hours ago

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ! ಕಿಲೋಮೀಟರ್‌ಗಟ್ಟಲೆ ಸರತಿ ಸಾಲು

ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ಸಂಭ್ರಮ ಮುಂದುವರಿದಿದೆ. ದರ್ಶನದ ಮೂರನೇ ದಿನವಾದ ಇಂದು ತಾಯಿಯ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ…

1 day ago

ದೆಹಲಿಯಲ್ಲಿ ಮಾಲಿನ್ಯಕ್ಕೆ ಕಡಿವಾಣ: ಶೇ.50 ಸಿಬ್ಬಂದಿಗೆ ಮನೆಯಿಂದಲೇ ಕೆಲಸ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ವರದಿಯಾಗಿದೆ.…

1 day ago