ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ ಆರೋಪದ ಮೇಲೆ ಎಂಟು ಜನರನ್ನು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಿಂದ ಬಂಧಿಸಲಾಗಿದೆ.
ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಉಡುಪು ಉತ್ಪಾದನಾ ಘಟಕಗಳಿಂದ ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂಬ ಆರು ಶಂಕಿತರನ್ನು ಬಂಧಿಸಲಾಗಿದ್ದು, ಇಬ್ಬರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಬಂಧಿತ ಶಂಕಿತರಲ್ಲಿ ಬಾಂಗ್ಲಾದೇಶಿ ಪ್ರಜೆಗಳೂ ಸೇರಿದ್ದಾರೆ.
ಆರೋಪಿಗಳು ಗುರುತಿನ ಚೀಟಿಗಾಗಿ ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸುತ್ತಿದ್ದರು. ಶಂಕಿತರಿಂದ ಎಂಟು ಮೊಬೈಲ್ ಫೋನ್‌ಗಳು ಮತ್ತು 16 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡು ಪೊಲೀಸರು ಶಂಕಿತರನ್ನು ಬಂಧಿಸಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಸಂಘಟನೆಯು ದೆಹಲಿಯ ಕೆಂಪು ಕೋಟೆ ಮತ್ತು ಚಾಂದನಿ ಚೌಕ್‌ನಲ್ಲಿರುವ ದೇವಾಲಯ ಸೇರಿದಂತೆ ದೇಶಾದ್ಯಂತ ಪ್ರಮುಖ ಧಾರ್ಮಿಕ ಸ್ಥಳಗಳ ಬಳಿ ಸ್ಛೋಟಕ್ಕೆ ಸಂಚು ರೂಪಿಸಿದೆ ಎಂದು ಮೂಲಗಳು ಎಚ್ಚರಿಸಿದ್ದವು. ಹೀಗೆ ತಿಳಿಸಿದ ಒಂದು ದಿನದ ಬೆನ್ನಲ್ಲೇ 8 ಮಂದಿಯನ್ನು ಬಂಧಿಸಲಾಗಿದೆ. ದೇಶದ ಅನೇಕ ಭಾಗಗಳಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ಯೋಜಿಸುತ್ತಿರುವ ಶಂಕಿತ ಭಯೋತ್ಪಾದಕ ಮಾಡ್ಯೂಲ್ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬೆನ್ನಲ್ಲೇ ದೆಹಲಿಯ ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಕೇಂದ್ರ ಭದ್ರತಾ ಸಂಸ್ಥೆಗಳು ಸ್ಥಳೀಯ ಪೊಲೀಸ್‌ಗೆ ಸಹಾಯ ಮಾಡುತ್ತಿವೆ. ತನಿಖೆ ಮುಂದುವರೆದಿದ್ದು, ಇನ್ನೂ ಹೆಚ್ಚಿನ ಬಂಧನಗಳು ಸಾಧ್ಯವಿದೆ ಎಂದು ಮೂಲಗಳು ತಿಳಿಸಿವೆ.
ಹಣಕಾಸು ಸಂಪರ್ಕ!
ಇವರು ವಿದೇಶಿ ಮೂಲಗಳಿಂದ ಹಣ ಪಡೆದಿದ್ದಾರೆ ಎಂಬ ಮಾಹಿತಿಯೂ ತನಿಖೆಯಲ್ಲಿ ಹೊರಬಂದಿದೆ. ಆ ಹಣವನ್ನು ಭಾರತಕ್ಕೆ ಹೇಗೆ ಕಳುಹಿಸಲಾಯಿತು? ಯಾರ ಮೂಲಕ ವರ್ಗಾಯಿಸಲಾಯಿತು? ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಭಯೋತ್ಪಾದಕ ಜಾಲಕ್ಕೆ ಲಾಜಿಸ್ಟಿಕಲ್ ಬೆಂಬಲ ನೀಡುತ್ತಿದ್ದರೆಂಬ ಅನುಮಾನವೂ ಇದೆ.
ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…
ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…
ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…
ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್‌ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…
ತಮಿಳುನಾಡಿನಲ್ಲಿ ಬೇಸಿಗೆಯ ಸುಡು ಬಿಸಿಲಿಸಿನ ನಡುವೆ ವಿಧಾನಸಭೆಯ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಚುನಾವಣೆಯು ಏಪ್ರಿಲ್ ಕೊನೆಯ ವಾರದೊಳಗೆ…