ದೇಶ- ವಿದೇಶ

ದೆಹಲಿ| 23 ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌: ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಂಧನ

ನವದೆಹಲಿ: ಇಲ್ಲಿನ 23 ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಕಳುಹಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಬಂಧಿಸಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳಿಂದ ತಿಳಿದು ಬಂದಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಪೊಲೀಸ್‌ ಅಧಿಕಾರಿಗಳು, ದ್ವಿತೀಯ ಪಿಯುಸಿ ವಿದ್ಯಾರ್ಥಿಯೇ ನವದೆಹಲಿಯ 23 ಶಾಲೆಗಳಿಗೆ ಬಾಂಬ್‌ ಬೆದರಿಕೆ ಸಂದೇಶವನ್ನು ಇ-ಮೇಲ್‌ ಮೂಲಕ ಕಳುಹಿಸಿದ್ದಾನೆ ಬಂದು ಬಹಿರಂಗಪಡಿಸಿದ್ದಾರೆ.

ಇತ್ತೀಚಿಗೆ ಕೆಲವು ತಿಂಗಳಿನಿಂದ ದೆಹಲಿಯ ಹಲವು ಶಾಲೆಗಳಿಗೆ ಸರಣಿ ಬಾಂಬ್‌ ಸ್ಫೋಟದ ಬೆದರಿಕೆ ಸಂದೇಶ ಬರುತ್ತಿದ್ದು, ಇದು ದೆಹಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಆದರೆ ಇದೀಗ ಮೂಲ ಪತ್ತೆ ಹಚ್ಚಿರುವ ಪೊಲೀಸರಿಗೆ ಶಾಕ್‌ ಆಗಿದೆ. ಏಕೆಂದರೆ ಬಂಧನವಾರುವ ವಿದ್ಯಾರ್ಥಿಯೇ, ತಾನು ಪರೀಕ್ಷೆಯಿಂದ ತಪ್ಪಿಸಿಕೊಳ್ಳಲೆಂದು ದೆಹಲಿಯಲ್ಲಿರುವ ವಿವಿಧ ಶಾಲೆಗಳಿಗೆ ಬಾಂಬ್‌ ಬೆದರಿಕೆ ಸಂದೇಶವನ್ನು ಇ-ಮೇಲ್‌ ಮೂಲಕ ರವಾನಿಸಲಾಗಿತ್ತು ಎಂದು ಹೇಳಿಕೆ ನೀಡಿದ್ದೇನೆ. ಹೀಗಾಗಿ ಈ ಬಗ್ಗೆ ದೆಹಲಿಯ ಡಿಎಸ್‌ಪಿ ಅಂಕಿತ್‌ ಚೌಹಾಣ್‌ ಮಾಹಿತಿ ನೀಡಿದ್ದಾರೆ.

ಮದರ್ಸ್‌ ಇಂಟರ್‌ ನ್ಯಾಷನಲ್‌ ಸ್ಕೂಲ್‌, ಮಾಡರ್ನ್‌ ಸ್ಕೂಲ್‌, ಸ್ಪ್ರಿಂಗ್‌ಡೇಲ್‌ ಸ್ಕೂಲ್‌, ಜಿಡಿ ಗೋಯೆಂಕಾ ಪಬ್ಲಿಕ್‌ ಸ್ಕೂಲ್‌, ಸೇಂಟ್‌ ಕೊಲಂಬಾಸ್‌ ಸ್ಕೂಲ್‌, ಸಲ್ವಾನ್‌ ಪಬ್ಲಿಕ್‌ ಸ್ಕೂಲ್‌ ಸೇರಿದಂತೆ 23 ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು ಎಂದು ತಿಳಿಸಿದ್ದಾರೆ. ಆದರೆ ಇದೀಗ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿಯೂ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಅರ್ಚನ ಎಸ್‌ ಎಸ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

12 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago