ಹೊಸದಿಲ್ಲಿ : ದಿಲ್ಲಿ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ಇದೀಗ ಭಾರತದ ಪ್ರಮುಖ ಭಯೋತ್ಪಾದನಾ ವಿರೋಧಿ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಹಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿ ಕಾರು ಸ್ಫೋಟ ಘಟನೆ ನಡೆದ ಸ್ಥಳಕ್ಕೆ ಅಮಿತ್ ಶಾ ಅವರು ಭೇಟಿ ನೀಡಿದರು. ವಿವಿಧೆಡೆ ಭದ್ರತಾ ಪರಿಶೀಲನೆ ನಡೆಸಿದರು. ಆ ಬೆನ್ನಲ್ಲೇ ಎನ್‌ಐಎ ತನಿಖೆಗೆ ಪ್ರಕರಣವಹಿಸಲಾಗಿದೆ. ಈ ಕೃತ್ಯದ ಹಿಂದೆ ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯರ ಕೈವಾಡವಿರುವ ಶಂಕೆ ವ್ಯಕ್ತಪಡಿಸಿದೆ.
ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.





