ನವದೆಹಲಿ: ಐತಿಹಾಸಿಕ ಕೆಂಪುಕೋಟೆಯ ಬಳಿ ಅಮಾಯಕ ಜೀವಗಳನ್ನು ಬಲಿ ಪಡೆದ ಭೀಕರ ಸ್ಫೋಟದ ಎರಡು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಭದ್ರತೆ ಕುರಿತು ಸಂಪುಟ ಸಮಿತಿಯ ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನು ಓದಿ: ದಿಲ್ಲಿಯಲ್ಲಿ ಬಾಂಬ್ ಬ್ಲಾಸ್ಟ್ | ರಾಜ್ಯದಲ್ಲೂ ಅಲರ್ಟ್ ಘೋಷಣೆ ; ಸಿಎಂ
ಈ ನಡುವೆ ಸ್ಫೋಟದಲ್ಲಿ ಗಾಯಗೊಂಡಿರುವವರನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ನಿಮ್ಮ ಜೊತೆ ನಾವಿದ್ದೇವೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಧೈರ್ಯ ಹೇಳಿದ್ದಾರೆ.
ಇಂದು ಭೂತಾನ್‌ನಿಂದ ಹಿಂದಿರುಗಿದ ಪ್ರಧಾನಿ ಮೋದಿ ಅವರು ಸಂಜೆ ಭದ್ರತೆ ಕುರಿತ ಉನ್ನತ ಮಟ್ಟದ ಕ್ಯಾಬಿನೆಟ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.





