ಹೊಸದಿಲ್ಲಿ : ದಿಲ್ಲಿ ಕಾರು ಸ್ಛೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಸೋಮವಾರ ಜಮ್ಮು ಮತ್ತು ಕಾಶ್ಮೀರ ಹಾಗೂ ಉತ್ತರ ಪ್ರದೇಶದ ಹಲವು ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿತು . ಈ ರಾಜ್ಯಗಳ ವಿವಿಧ ಜಿಲ್ಲೆಗಳಲ್ಲಿ ಪ್ರಕರಣದಲ್ಲಿ ಭಾಗಿಯಾದವರೊಂದಿಗೆ ಸಂಪರ್ಕ ಹೊಂದಿರುವ ಸ್ಥಳಗಳಲ್ಲಿ ಶಂಕಿತರಿಗಾಗಿ ಶೋಧ ನಡೆಸಲಾಯಿತು.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಬಂಧಿತ ಆರೋಪಿಗಳು ಮತ್ತು ಅವರ ಸಹಚರರ ನಿವಾಸಗಳಲ್ಲಿ ಶೋಧ ಕಾರ್ಯ ನಡೆಯಿತು ಎಂದು ಮೂಲಗಳು ತಿಳಿಸಿವೆ. ನ. ೧೦ರಂದು ನಡೆದ ಭೀಕರ ಕಾರು ಸ್ಛೋಟದಲ್ಲಿ ೧೫ ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳನೇ ಆರೋಪಿ ಫರೀದಾಬಾದ್‌ನ ಧೌಜ್‌ನ ಸೋಯಾಬ್ ಎಂಬಾತನನ್ನು ಬಂಽಸಿದ ಕೆಲವು ದಿನಗಳ ನಂತರ ಎನ್‌ಐಎ ಈ ದಾಳಿ ನಡೆಸುತ್ತಿದೆ. ಭಯೋತ್ಪಾದಕ ಕೃತ್ಯಕ್ಕೆ ಸ್ವಲ್ಪ ಮೊದಲು ಸೋಯಾಬ್ ಎಂಬಾತ ಬಾಂಬರ್ ಉಮರ್ ಉನ್ ನಬಿಗೆ ಆಶ್ರಯ ನೀಡಿದ್ದ ಎನ್ನಲಾಗಿದೆ. ಉಮರ್‌ಗೆ ಆಶ್ರಯ ನೀಡಿದ್ದಲ್ಲದೆ ದಾಳಿಗೂ ಮುನ್ನ ಭಯೋತ್ಪಾದಕರ ಚಲನವಲನಕ್ಕೆ ಲಾಜಿಸ್ಟಿಕಲ್ ಬೆಂಬಲವನ್ನೂ ನೀಡಿದ್ದ ಎಂಬುದು ತಿಳಿದು ಬಂದಿದೆ.
ಇದನ್ನೂ ಓದಿ :-ದಿತ್ವಾ ಚಂಡಮಾರುತ : ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಚಳಿ ಹೆಚ್ಚಳ
ನ.೨೦ರಂದು ತನಿಖಾ ತಂಡವು ಶಾಹೀನ್ ಸಯೀದ್ ಜೊತೆಗೆ ಪುಲ್ವಾಮಾದ ಡಾ.ಮುಜಮ್ಮಿಲ್ ಶಕೀಲ್ ಗನೈ, ಅನಂತನಾಗ್‌ನ ಡಾ.ಅದೀಲ್ ಅಹ್ಮದ್ ರಾಥರ್ ಮತ್ತು ಶೋಪಿಯಾನ್‌ನ ಮುಫ್ತಿ ಇರ್ಫಾನ್ ಅಹ್ಮದ್ ವಾಗೆ ಎಂಬವರನ್ನು ಬಂಽಸಿತ್ತು. ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಜಿಲ್ಲಾ ಸೆಷನ್ಸ್ ನ್ಯಾಯಾಽಶರು ನೀಡಿದ ಆದೇಶದ ಮೇರೆಗೆ ಶ್ರೀನಗರದಲ್ಲಿ ಎನ್‌ಐಎ ಈ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದೆ.
ಇದಕ್ಕೂ ಮೊದಲು ಎನ್‌ಐಎ, ಸ್ಛೋಟಕ್ಕೆ ಬಳಸಲಾದ ಕಾರನ್ನು ನೋಂದಾಯಿಸಲಾಗಿದ್ದ ಅಮೀರ್ ರಶೀದ್ ಅಲಿ ಮತ್ತು ಮಾರಕ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನಿಗೆ ತಾಂತ್ರಿಕ ನೆರವು ನೀಡಿದ್ದ ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿತ್ತು.
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…
ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…
ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…