Mysore
30
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಇಂದು(ಜೂ.20) ಜಾಮೀನು ಮಂಜೂರಾಗಿದೆ.

ಬುಧವಾರ(ಜೂ.19) ಕೇಜ್ರಿವಾಲ್‌ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ರೋಸ್‌ ಅವೆನ್ಯೂ ಕೋರ್ಟ್‌ ಗುರಾವಾರಕ್ಕೆ(ಜೂ.20) ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಎರಡು ದಿನ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ಅಂತಿಮವಾಗಿ ಇಂದು ಜಾಮೀನು ಮಂಜೂರು ಮಾಡಿದೆ. ಆದರೆ ಈ ಜಾರಿ ನಿರ್ದೇಶನಾಲಯವು ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿದೆ.

ಅರವಿಂದ್‌ ಕೇಜ್ರಿವಾಲ್‌ ಅವರು 1 ಲಕ್ಷ ರೂ.ಜಾಮೀನು ಬಾಂಡ್‌ ಪಾವತಿಸಿದ ನಂತರ ಶುಕ್ರವಾರ ತಿಹಾರ್‌ ಜೈಲಿನಿಂದ ಹೊರಬರುವ ಸಾಧ್ಯತೆಯಿದೆ.

2021-22 ರ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ 100ಕೋಟಿ ರೂ.ಗೆ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಕ್ಕೆ ತನ್ನ ಬಳಿ ಸಾಕ್ಷ್ಯವಿದೆ ಎಂದು ಇಡಿ ಹೇಳಿ, ಜಾರಿ ನಿರ್ದೇಶನಾಲಯವು ಕೇಜ್ರಿವಾಲ್‌ರನ್ನು ಬಂಧಿಸಿತ್ತು.

Tags:
error: Content is protected !!