ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಇಂದು(ಜೂ.20) ಜಾಮೀನು ಮಂಜೂರಾಗಿದೆ.
ಬುಧವಾರ(ಜೂ.19) ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ರೋಸ್ ಅವೆನ್ಯೂ ಕೋರ್ಟ್ ಗುರಾವಾರಕ್ಕೆ(ಜೂ.20) ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಎರಡು ದಿನ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ಅಂತಿಮವಾಗಿ ಇಂದು ಜಾಮೀನು ಮಂಜೂರು ಮಾಡಿದೆ. ಆದರೆ ಈ ಜಾರಿ ನಿರ್ದೇಶನಾಲಯವು ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿದೆ.
ಅರವಿಂದ್ ಕೇಜ್ರಿವಾಲ್ ಅವರು 1 ಲಕ್ಷ ರೂ.ಜಾಮೀನು ಬಾಂಡ್ ಪಾವತಿಸಿದ ನಂತರ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬರುವ ಸಾಧ್ಯತೆಯಿದೆ.
2021-22 ರ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ 100ಕೋಟಿ ರೂ.ಗೆ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಕ್ಕೆ ತನ್ನ ಬಳಿ ಸಾಕ್ಷ್ಯವಿದೆ ಎಂದು ಇಡಿ ಹೇಳಿ, ಜಾರಿ ನಿರ್ದೇಶನಾಲಯವು ಕೇಜ್ರಿವಾಲ್‌ರನ್ನು ಬಂಧಿಸಿತ್ತು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…