Mysore
20
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಜಾಮೀನು ವಿಚಾರಣೆಗೂ ಮೊದಲೇ ಸಿಬಿಐನಿಂದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಬಂಧನ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ತಿಹಾರ್‌ ಜೈಲಿನಲ್ಲಿದ್ದರು. ಸುಪ್ರಿಂ ಕೋರ್ಟ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ನಡೆಸಬೇಕಿತ್ತು. ಅದಕ್ಕೂ ಮೊದಲೇ ಸಿಬಿಐ ಅರವಿಂದ್‌ ಕೇಜ್ರಿವಾಲ್‌ರನ್ನು ಬಂಧಿಸಿ ತನ್ನ ವಶಕ್ಕೆ ಪಡೆದುಕೊಂಡಿದೆ.

ಇಡಿ ಮನಿ ಲಾಂಡರಿಂಗ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಜಾಮೀನಿನ ವಿಚಾರಣೆಗೂ ಮುನ್ನ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಸಂಜೆ ತಿಹಾರ್‌ ಜೈಲಿನಿಂದ ಬಂಧಿಸಿದೆ.

ಕೇಂದ್ರೀಯ ತನಿಖಾ ದಳ ಇಂದು ತಿಹಾರ್‌ ಜೈಲಿನಲ್ಲಿ ಕೇಜ್ರಿವಾಲ್‌ ಅವರನ್ನು ಪರೀಕ್ಷಿಸಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿದೆ. ನಾಳೆ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಕೇಜ್ರಿವಾಲ್‌ರನ್ನು ಹಾಜರುಪಡಿಸಲು ಸಿಬಿಐ ಅನುಮತಿ ಪಡೆದಿದೆ. ಅವರನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ದೆಹಲಿ ಅಕ್ರಮ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ರನ್ನು ಕಳೆದ ಮಾರ್ಚ್‌.21ರಂದು ಇಡಿ ಬಂಧಿಸಿತ್ತು. ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂಕೋರ್ಟ್‌ ಜೂನ್.‌1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್.‌2ರಂದು ಅವರು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿದ್ದರು.

 

Tags: