ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದರು. ಸುಪ್ರಿಂ ಕೋರ್ಟ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ನಡೆಸಬೇಕಿತ್ತು. ಅದಕ್ಕೂ ಮೊದಲೇ ಸಿಬಿಐ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿ ತನ್ನ ವಶಕ್ಕೆ ಪಡೆದುಕೊಂಡಿದೆ.
ಇಡಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಜಾಮೀನಿನ ವಿಚಾರಣೆಗೂ ಮುನ್ನ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಸಂಜೆ ತಿಹಾರ್ ಜೈಲಿನಿಂದ ಬಂಧಿಸಿದೆ.
ಕೇಂದ್ರೀಯ ತನಿಖಾ ದಳ ಇಂದು ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ಪರೀಕ್ಷಿಸಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿದೆ. ನಾಳೆ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಕೇಜ್ರಿವಾಲ್‌ರನ್ನು ಹಾಜರುಪಡಿಸಲು ಸಿಬಿಐ ಅನುಮತಿ ಪಡೆದಿದೆ. ಅವರನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ದೆಹಲಿ ಅಕ್ರಮ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ರನ್ನು ಕಳೆದ ಮಾರ್ಚ್.21ರಂದು ಇಡಿ ಬಂಧಿಸಿತ್ತು. ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂಕೋರ್ಟ್ ಜೂನ್.1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್.2ರಂದು ಅವರು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿದ್ದರು.
ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…
ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…
ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…