Mysore
33
scattered clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ದೆಹಲಿಯಲ್ಲಿ ಎಎಪಿ ಹೀನಾಯ ಸೋಲು: ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಕ್ಷದ ನಾಯಕಿ ಅತಿಶಿ ಅವರಿಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್‌ ಗವರ್ನರ್‌ ಅವರಿಗೆ ರಾಜೀನಾಲೆ ಪತ್ರ ಸಲ್ಲಿಸಿದ್ದಾರೆ.

ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರಿಗೆ ಅತಿಶಿ ರಾಜೀನಾಮೆ ಪತ್ರ ಹಸ್ತಾಂತರ ಮಾಡಿದ್ದಾರೆ.

ಈ ಮೂಲಕ ನವದೆಹಲಿಯಲ್ಲಿ ಎಎಪಿ ಆಡಳಿತ ಕೊನೆಗೊಂಡಿದ್ದು, ಇದೇ ಮೊದಲ ಬಾರಿಗೆ ಅದು ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲಿದೆ.

ಈ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿಯು ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಇನ್ನು ಬಿಜೆಪಿಯಿಂದ ಯಾರು ಸಿಎಂ ಆಗಲಿದ್ದಾರೆ ಎಂಬುದು ತೀವ್ರ ಕುತೂಹಲ ಎನಿಸಿದ್ದು, ಇಂದು ಸಂಜೆಯ ವೇಳೆಗೆ ಸಿಎಂ ಅಭ್ಯರ್ಥಿ ಯಾರೆಂದು ಘೋಷಣೆಯಾಗಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ 48 ಸ್ಥಾನ ಗೆದ್ದುಕೊಂಡಿದೆ. ಅಧಿಕಾರ ಕಳೆದುಕೊಂಡಿರುವ ಎಎಪಿ ಕೇವಲ 22 ಸ್ಥಾನಗಳಿಗೆ ತೃಪ್ತಿಪಡೆದುಕೊಂಡಿದೆ. ಕಾಂಗ್ರೆಸ್‌ ಸತತ ಮೂರನೇ ಸಲವೂ ಖಾತೆ ತೆರೆಯುವಲ್ಲಿ ಸಂಪೂರ್ಣ ವಿಫಲವಾಗಿದೆ.

Tags: