ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಅವರಿಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ರಾಜೀನಾಲೆ ಪತ್ರ ಸಲ್ಲಿಸಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಗೆ ಅತಿಶಿ ರಾಜೀನಾಮೆ ಪತ್ರ ಹಸ್ತಾಂತರ ಮಾಡಿದ್ದಾರೆ.
ಈ ಮೂಲಕ ನವದೆಹಲಿಯಲ್ಲಿ ಎಎಪಿ ಆಡಳಿತ ಕೊನೆಗೊಂಡಿದ್ದು, ಇದೇ ಮೊದಲ ಬಾರಿಗೆ ಅದು ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲಿದೆ.
ಈ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿಯು ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಇನ್ನು ಬಿಜೆಪಿಯಿಂದ ಯಾರು ಸಿಎಂ ಆಗಲಿದ್ದಾರೆ ಎಂಬುದು ತೀವ್ರ ಕುತೂಹಲ ಎನಿಸಿದ್ದು, ಇಂದು ಸಂಜೆಯ ವೇಳೆಗೆ ಸಿಎಂ ಅಭ್ಯರ್ಥಿ ಯಾರೆಂದು ಘೋಷಣೆಯಾಗಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ 48 ಸ್ಥಾನ ಗೆದ್ದುಕೊಂಡಿದೆ. ಅಧಿಕಾರ ಕಳೆದುಕೊಂಡಿರುವ ಎಎಪಿ ಕೇವಲ 22 ಸ್ಥಾನಗಳಿಗೆ ತೃಪ್ತಿಪಡೆದುಕೊಂಡಿದೆ. ಕಾಂಗ್ರೆಸ್ ಸತತ ಮೂರನೇ ಸಲವೂ ಖಾತೆ ತೆರೆಯುವಲ್ಲಿ ಸಂಪೂರ್ಣ ವಿಫಲವಾಗಿದೆ.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…