Mysore
14
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದ ಅರವಿಂದ್‌ ಕೇಜ್ರಿವಾಲ್‌ಗೆ ಧನ್ಯವಾದ ಹೇಳಿದ ಆತಿಶಿ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳ ನಡುವೆ ನೂತನ ಸಿಎಂ ಆಗಿ ಆಯ್ಕೆಯಾದ ಆತಿಶಿ ಅವರು, ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆತಿಶಿ ಅವರು, ನನ್ನ ರಾಜಕೀಯ ಗುರು ಅರವಿಂದ್‌ ಕೇಜ್ರಿವಾಲ್‌. ಅವರಿಂದಲೇ ನಾನು ಈ ಸ್ಥಾನಕ್ಕೆ ಏರಿದ್ದೇನೆ. ಮೊದಲು ನಾನು ನನ್ನ ಗುರು ಅರವಿಂದ್‌ ಕೇಜ್ರಿವಾಲ್‌ಗೆ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ.

ಅವರು ನನ್ನ ಮೇಲೆ ನಂಬಿಕೆ ಇರಿಸಿ ಅಂತಹ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ಇದು ಕೇವಲ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದಲ್ಲಿ ಎಎಪಿಯಲ್ಲಿ ಮಾತ್ರ ನಡೆಯಲು ಸಾಧ್ಯ. ನಾನು ಸಾಮಾನ್ಯ ಕುಟುಂಬದಿಂದ ಬಂದ ಹೆಣ್ಣುಮಗಳಾಗಿದ್ದು, ನನಗೆ ಟೀಕೆಟ್‌ ನೀಡುವುದೇ ಕೂಡ ಕಷ್ಟವಾಗಿತ್ತು.

ಹೀಗಿರುವಾಗ ಅರವಿಂದ್‌ ಕೇಜ್ರಿವಾಲ್‌ ಅವರು ನನ್ನನ್ನು ನಂಬಿ ಸಿಎಂ ಜವಾಬ್ದಾರಿಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನನಗೆ ತುಂಬಾ ಸಂತೋಷವಾಗಿದೆ. ದೆಹಲಿಯ ಏಕೈಕ ಮುಖ್ಯಮಂತ್ರಿ ಎಂದರೆ ಅದು ಅರವಿಂದ್‌ ಕೇಜ್ರಿವಾಲ್‌ ಮಾತ್ರ ಎಂದು ಹೇಳಲು ಬಯಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

 

Tags:
error: Content is protected !!