ನವದೆಹಲಿ: ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳ ಮೋಕ್ಷ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅವರಿಗೆ ಝಡ್ ಶ್ರೇಣಿ ಭದ್ರತೆಯನ್ನು ಕಲ್ಪಿಸಿದೆ.
ಈ ಕುರಿತು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಸಿಎಂ ರೇಖಾ ಗುಪ್ತಾ ಅವರ ಅಧಿಕೃತ ನಿವಾಸಕ್ಕೆ ಅರೆಸೈನಿಕ ಪಡೆಯ ವಿಐಪಿ ಸೆಕ್ಯುರಿಟಿ ಗ್ರೂಪ್‌ನ ಭದ್ರತೆ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಇನ್ನು ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ಕೇಂದ್ರ ಮೀಸಲು ಪಡೆ ಭದ್ರತೆ ಒದಗಿಸಿದೆ.
ಇನ್ನು ನಿನ್ನೆ 35 ವರ್ಷದ ವ್ಯಕ್ತಿಯೊಬ್ಬ ಸಿಎಂ ರೇಖಾ ಗುಪ್ತಾ ಅವರ ಬಳಿ ಹಲವು ದಾಖಲೆಗಳನ್ನು ಹಿಡಿದುಕೊಂಡು ಬಂದಿದ್ದನು. ಈ ವೇಳೆ ನೋಡನೋಡುತ್ತಿದ್ದಂತೆ ರೇಖಾ ಗುಪ್ತಾ ಅವರಿಗೆ ಕಪಾಳ ಮೋಕ್ಷ ಮಾಡಿದ್ದನು.
ಕೂಡಲೇ ಆ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ, ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.





