Mysore
20
overcast clouds
Light
Dark

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಹಿನ್ನಡೆ: ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕಸ್ಟಡಿಯನ್ನು ಸೆಪ್ಟೆಂಬರ್.‌2ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ನೀಡಿದ್ದ ನ್ಯಾಯಾಂಗ ಬಂಧನದ ಅವಧಿ ಇಂದಿಎಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಸೆಪ್ಟೆಂಬರ್.‌2ರವರೆಗೆ ಕಸ್ಟಡಿಯನ್ನು ವಿಸ್ತರಿಸಿದ್ದು, ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೆ ಹಿನ್ನೆಡೆಯಾಗಿದೆ.

ಈ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ಗೆ ಈ ಹಿಂದೆ ಸುಪ್ರೀಂಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಇದನ್ನು ಪ್ರಶ್ನಿಸಿ ಸಿಬಿಐ ಮತ್ತೆ ಸುಪ್ರೀಂಗೆ ಅರ್ಜಿ ಹಾಕಿತ್ತು. ಆಗ ಸುಪ್ರೀಂಕೋರ್ಟ್‌ ಜಾಮೀನು ಆದೇಶವನ್ನು ಮುಂದೂಡಿತ್ತು.