Mysore
31
clear sky

Social Media

ಗುರುವಾರ, 06 ಫೆಬ್ರವರಿ 2025
Light
Dark

ದಿಲ್ಲಿ ಚುನಾವಣೆ: ಮತ ಚಲಾಯಿಸಿದ ರಾಷ್ಟ್ರಪತಿ ಮುರ್ಮು, ರಾಹುಲ್‌ ಗಾಂಧಿ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಯ 70 ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ರಿಂದ ಮತದಾನ ಆರಂಭವಾಗಿದೆ.

ದೆಹಲಿಗೆ ಇದು 8ನೆಯ ವಿಧಾನಸಭೆ ಚುನಾವಣೆಯಾಗಿದ್ದು, ಬಿಗಿ ಭದ್ರತೆಯಲ್ಲಿ ಮತ ಚಲಾವಣೆ ನಡೆಯುತ್ತಿದೆ.

ಸಿಎಂ ಅತಿಶಿ ವಿರುದ್ಧ ಕಣಕ್ಕಿಳಿದಿರುವ ಕಾಂಗ್ರೆಸ್‌ ಅಭ್ಯರ್ಥಿ ಅಲ್ಕಾ ಲಂಬಾ ಅವರು ಬೆಳಂಬೆಳಗ್ಗೆ ಮತ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ದಿಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ. ಖಂಡಿತ ಈ ಬಾರಿ ಬದಲಾವಣೆಯಾಗಿ ದಿಲ್ಲಿ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ಗಣ್ಯರಿಂದ ಮತದಾನ: ರಾಷ್ಟ್ರಪತಿ ದ್ರೌಪದಿ ಮುರ್ಮು, ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಬಿಜೆಪಿ ಸಂಸದೆ ಸುಷ್ಮ ಸ್ವರಾಜ್‌, ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ, ಆಪ್‌ ನಾಯಕ ಮನೀಶ್‌ ಸಿಸೋಡಿಯಾ ಅವರು ಸೇರಿದಂತೆ ಇನ್ನಿತರರು ತಮಗೆ ನಿಗದಿ ಪಡಿಸಿದ ಕೇಂದ್ರಗಳಲ್ಲಿ ಮತ ಚಲಾವಣೆ ಮಾಡಿದರು.

Tags: