ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಯ 70 ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ರಿಂದ ಮತದಾನ ಆರಂಭವಾಗಿದೆ.
ದೆಹಲಿಗೆ ಇದು 8ನೆಯ ವಿಧಾನಸಭೆ ಚುನಾವಣೆಯಾಗಿದ್ದು, ಬಿಗಿ ಭದ್ರತೆಯಲ್ಲಿ ಮತ ಚಲಾವಣೆ ನಡೆಯುತ್ತಿದೆ.
ಸಿಎಂ ಅತಿಶಿ ವಿರುದ್ಧ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಅಲ್ಕಾ ಲಂಬಾ ಅವರು ಬೆಳಂಬೆಳಗ್ಗೆ ಮತ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ದಿಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ. ಖಂಡಿತ ಈ ಬಾರಿ ಬದಲಾವಣೆಯಾಗಿ ದಿಲ್ಲಿ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
ಗಣ್ಯರಿಂದ ಮತದಾನ: ರಾಷ್ಟ್ರಪತಿ ದ್ರೌಪದಿ ಮುರ್ಮು, ವಿಪಕ್ಷ ನಾಯಕ ರಾಹುಲ್ ಗಾಂಧಿ, ಬಿಜೆಪಿ ಸಂಸದೆ ಸುಷ್ಮ ಸ್ವರಾಜ್, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಆಪ್ ನಾಯಕ ಮನೀಶ್ ಸಿಸೋಡಿಯಾ ಅವರು ಸೇರಿದಂತೆ ಇನ್ನಿತರರು ತಮಗೆ ನಿಗದಿ ಪಡಿಸಿದ ಕೇಂದ್ರಗಳಲ್ಲಿ ಮತ ಚಲಾವಣೆ ಮಾಡಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…