ನವದೆಹಲಿ: ದೆಹಲಿ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದ್ದು, ಎಎಪಿ ದಿಗ್ಗಜ ನಾಯಕರಿಗೆ ದೊಡ್ಡ ಆಘಾತವಾಗಿದೆ.
ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಷ್ ಸಿಸೋಡಿಯಾ ಸೇರಿದಂತೆ ಎಎಪಿ ಘಟಾನುಘಟಿ ನಾಯಕರು ಸೋಲನನ್ನುಭವಿಸಿದ್ದಾರೆ. ಕಲ್ಕಾಜಿ ಕ್ಷೇತ್ರದಿಂದ ಸಿಎಂ ಅತಿಶಿ ಗೆಲುವು ಸಾಧಿಸಿದ್ದಾರೆ.
ನವದೆಹಲಿ ಕ್ಷೇತ್ರದಿಂದ ಕೇಜ್ರಿವಾಲ್ ವಿರುದ್ಧ ಸ್ಪರ್ಧೆ ಮಾಡಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಗೆಲುವು ಸಾಧಿಸಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ನಾಯಕರಲ್ಲಿ ಸಂಭ್ರಮ ಜೋರಾಗಿದೆ.
ಫಲಿತಾಂಶ ನೋಡುತ್ತಿದ್ದಂತೆ ಸಂಭ್ರಮದಲ್ಲಿ ಮುಳುಗಿದ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಖುಷಿ ವ್ಯಕ್ತಪಡಿಸುತ್ತಿದ್ದಾರೆ.





