ನವದೆಹಲಿ: ದೆಹಲಿ ಚುನಾವಣೆಗೆ ಫಲಿತಾಂಶ ಆರಂಭಿಕ ಹಂತದಲ್ಲಿ ಅಂಚೆ ಮತಗಳ ಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಕೊಂಚ ಮನ್ನಡೆಯಲ್ಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿರುವ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು, ಆರಂಭದಲ್ಲೇ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಆತಂಕ ಶುರುವಾಗಿದೆ.
ಅಂಚೆ ಮತಪತ್ರಗಳನ್ನು ಮಹಾರಾಣಿ ಬಾಗ್‌ನ ಮೀರಾಬಾಯಿ ಡಿಎಸ್‌ಇಯು ಎಣಿಕೆ ಕೇಂದ್ರದಲ್ಲಿ ಎಣಿಕೆ ಮಾಡಲಾಗುತ್ತಿದೆ.
ಇನ್ನು ಫಲಿತಾಂಶ ಹೊರಬೀಳಲಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಬೆಳ್ಳಂ ಬೆಳಿಗ್ಗೆ ದೇವಸ್ಥಾನಗಳಿಗೆ ತೆರಳುತ್ತಿದ್ದು, ಗೆಲುವಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.





