ನವದೆಹಲಿ: ಇಂದು ನಡೆದ ದೆಹಲಿ ವಿಧಾನಸಭೆ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಶೇಕಡಾ 57.70ರಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆಯು ಸಂಜೆ ೬ ಗಂಟೆಯವರೆಗೂ ನಡೆಯಿತು.
ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಇನ್ನು ಮತದಾನದ ಹಿನ್ನೆಲೆಯಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಎಸ್.ಜೈಶಂಕರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಅರವಿಂದ್ ಕೇಜ್ರಿವಾಲ್, ಅತಿಶಿ ಸೇರಿದಂತೆ ಗಣ್ಯಾತಿಗಣ್ಯರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.
ಇನ್ನು ಫೆಬ್ರವರಿ.8ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಅಂದೇ ಚುನಾವಣಾ ಫಲಿತಾಂಶ ಹೊರಬೀಳಲಿದೆ.
ಒಟ್ಟು 70 ವಿಧಾನಸಭಾ ಕ್ಷೇತ್ರಗಳಿರುವ ದೆಹಲಿಯಲ್ಲಿ 699 ಅಭ್ಯರ್ಥಿಗಳ ಭವಿಷ್ಯ ಇಂದು ಮತಯಂತ್ರಗಳಲ್ಲಿ ಭದ್ರವಾಗಿದ್ದು, ಎಲ್ಲರ ಚಿತ್ತ ಈಗ ಫೆಬ್ರವರಿ.8ರ ಮತದಾನದ ಎಣಿಕೆಯತ್ತ ನೆಟ್ಟಿದೆ.