ದೇಶ- ವಿದೇಶ

ದೆಹಲಿ ವಿಧಾನಸಭಾ ಚುನಾವಣೆ ಮತದಾನ ಮುಕ್ತಾಯ: ಫೆಬ್ರವರಿ.8ಕ್ಕೆ ಫಲಿತಾಂಶ

ನವದೆಹಲಿ: ಇಂದು ನಡೆದ ದೆಹಲಿ ವಿಧಾನಸಭೆ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಶೇಕಡಾ 57.70ರಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆಯು ಸಂಜೆ ೬ ಗಂಟೆಯವರೆಗೂ ನಡೆಯಿತು.

ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಇನ್ನು ಮತದಾನದ ಹಿನ್ನೆಲೆಯಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಎಸ್.‌ಜೈಶಂಕರ್‌, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಅರವಿಂದ್‌ ಕೇಜ್ರಿವಾಲ್‌, ಅತಿಶಿ ಸೇರಿದಂತೆ ಗಣ್ಯಾತಿಗಣ್ಯರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಇನ್ನು ಫೆಬ್ರವರಿ.8ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಅಂದೇ ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಒಟ್ಟು 70 ವಿಧಾನಸಭಾ ಕ್ಷೇತ್ರಗಳಿರುವ ದೆಹಲಿಯಲ್ಲಿ 699 ಅಭ್ಯರ್ಥಿಗಳ ಭವಿಷ್ಯ ಇಂದು ಮತಯಂತ್ರಗಳಲ್ಲಿ ಭದ್ರವಾಗಿದ್ದು, ಎಲ್ಲರ ಚಿತ್ತ ಈಗ ಫೆಬ್ರವರಿ.8ರ ಮತದಾನದ ಎಣಿಕೆಯತ್ತ ನೆಟ್ಟಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

8 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

13 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

14 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

15 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

21 hours ago