ಹೊಸದಿಲ್ಲಿ : ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನೀರಿನ ಬಿಲ್ ಮನ್ನಾ ಮಾಡುವುದಾಗಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ಜಲಮಂಡಳಿಯ ತಪ್ಪು ಬಿಲ್‌ಗಳಿಂದಾಗಿ ಜನರು ಲಕ್ಷಾಂತರ ರೂಪಾಯಿ ನಷ್ಟದ ಆತಂಕಕ್ಕೆ ಒಳಗಾಗಿದ್ದಾರೆ. ನಾನು ಜೈಲಿಗೆ ಹೋದ ನಂತರ ನೀರಿನ ಬಿಲ್‌ಗಳಲ್ಲಿ ಲಕ್ಷಾಂತರ ರೂಪಾಯಿ ವ್ಯತ್ಯಾಸ ಕಂಡುಬಂದಿದೆ ಎಂದರು.
ನಾನು ಔಪಚಾರಿಕವಾಗಿ ಮಾತನಾಡುತ್ತಿದ್ದೇನೆ ವಿಧಾನಸಭೆಯ ಚುನಾವಣೆಯಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ತಮ್ಮ ಬಿಲ್‌ಗಳು ತಪ್ಪಾಗಿದೆ ಎಂದು ಭಾವಿಸುವವರು ಅವುಗಳನ್ನು ಪಾವತಿಸಬೇಕಾಗಿಲ್ಲ ಎಂದು ಹೇಳಿದ್ದಾರೆ.
ಎಎಪಿ ಸರ್ಕಾರ ತಿಂಗಳಿಗೆ 20,000 ಲೀಟರ್ ನೀರನ್ನು ಉಚಿತವಾಗಿ ನೀಡುತ್ತಾ ಬಂದಿದೆ ಮತ್ತು ದೆಹಲಿಯ 12 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.





