ದೇಶ- ವಿದೇಶ

ದೆಹಲಿ ಚುನಾವಣೆ | ಅಧಿಕಾರಕ್ಕೆ ಬಂದರೆ ನೀರಿನ ಬಿಲ್‌ ಮನ್ನಾ; ಅರವಿಂದ್‌ ಕೇಜ್ರಿವಾಲ್‌

ಹೊಸದಿಲ್ಲಿ : ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನೀರಿನ ಬಿಲ್‌ ಮನ್ನಾ ಮಾಡುವುದಾಗಿ  ಪಕ್ಷದ ಮುಖ್ಯಸ್ಥ  ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ಜಲಮಂಡಳಿಯ ತಪ್ಪು ಬಿಲ್‌ಗಳಿಂದಾಗಿ ಜನರು ಲಕ್ಷಾಂತರ ರೂಪಾಯಿ ನಷ್ಟದ ಆತಂಕಕ್ಕೆ ಒಳಗಾಗಿದ್ದಾರೆ. ನಾನು ಜೈಲಿಗೆ ಹೋದ ನಂತರ ನೀರಿನ ಬಿಲ್‌ಗಳಲ್ಲಿ ಲಕ್ಷಾಂತರ ರೂಪಾಯಿ ವ್ಯತ್ಯಾಸ ಕಂಡುಬಂದಿದೆ ಎಂದರು.

ನಾನು ಔಪಚಾರಿಕವಾಗಿ ಮಾತನಾಡುತ್ತಿದ್ದೇನೆ ವಿಧಾನಸಭೆಯ ಚುನಾವಣೆಯಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ತಮ್ಮ ಬಿಲ್‌ಗಳು ತಪ್ಪಾಗಿದೆ ಎಂದು ಭಾವಿಸುವವರು ಅವುಗಳನ್ನು ಪಾವತಿಸಬೇಕಾಗಿಲ್ಲ ಎಂದು ಹೇಳಿದ್ದಾರೆ.

ಎಎಪಿ ಸರ್ಕಾರ ತಿಂಗಳಿಗೆ 20,000 ಲೀಟರ್‌ ನೀರನ್ನು ಉಚಿತವಾಗಿ ನೀಡುತ್ತಾ ಬಂದಿದೆ ಮತ್ತು ದೆಹಲಿಯ 12 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

23 mins ago

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

38 mins ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

60 mins ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

1 hour ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

1 hour ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

12 hours ago