Mysore
18
overcast clouds

Social Media

ಭಾನುವಾರ, 11 ಜನವರಿ 2026
Light
Dark

ದೆಹಲಿ ಅಬಕಾರಿ ನೀತಿ ಪ್ರಕರಣ: ಇಡೀ ಎಎಪಿ ಪಕ್ಷವನ್ನೇ ಆರೋಪಿಯನ್ನಾಗಿ ಮಾಡಿದ ಇಡಿ

ನವದೆಹಲಿ: ನವದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ 8ನೇ ಚಾರ್ಜ್‌ ಶೀಟ್‌ ಸಲ್ಲಿಸಿರುವ ಇಡಿ(ಜಾರಿ ನಿರ್ದೇಶನಾಲಯ) ಇಡೀ ಆಮ್‌ ಆದ್ಮಿ ಪಕ್ಷವನ್ನೇ ಆರೋಪಿಯನ್ನಾಗಿ ದೂರಿದೆ.

ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಈ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಇಡಿ ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಅಬಕಾರಿ ನೀತಿಯಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸಹಿತ ಇಡೀ ಆಮ್‌ಆದ್ಮಿ ಪಕ್ಷವನ್ನು ಆರೋಪಿಗಳು ಎಂದು ಪ್ರಸ್ತಾಪಿಸಿ ಪೂರಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಮದ್ಯ ಮಾರಾಟಗಾರರಿಗೆ ಅನುಕೂಲವಾಗಲಿ ಎಂಬ ದಿಸೆಯಿಂದ ಸಿಎಂ ಅರವಿಂದ್‌ ಕೇಜ್ರಿವಾಲ್‌, ಡಿಸಿಎಂ ಮನೀಶ್‌ ಸಿಸೋಡಿಯಾ ಸೇರಿ ಹಲವು ನಾಯಕರು ಈ ಕಾನೂನನ್ನು ರೂಪಿಸಿದ್ದಾರೆ. ದಕ್ಷಿಣ ಭಾರತ ಹಲವು ವ್ಯಕ್ತಿಗಳು ಇದರ ಲಾಭ ಪಡೆದಿದ್ದು, ಲಾಭದ ಹಣದಲ್ಲಿ ಸ್ವಲ್ಪ ಭಾಗವನ್ನು ಎಎಪಿ ಪಕ್ಷಕ್ಕೆ ನೀಡಿದ್ದಾರೆ. ಬಂದ ಹಣವನ್ನು ಗೋವಾ ಚುನಾವಣೆಗೆ ಬಳಸಲಾಗಿದೆ ಎಂದು ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

Tags:
error: Content is protected !!