ನವದೆಹಲಿ: ನವದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ 8ನೇ ಚಾರ್ಜ್ ಶೀಟ್ ಸಲ್ಲಿಸಿರುವ ಇಡಿ(ಜಾರಿ ನಿರ್ದೇಶನಾಲಯ) ಇಡೀ ಆಮ್ ಆದ್ಮಿ ಪಕ್ಷವನ್ನೇ ಆರೋಪಿಯನ್ನಾಗಿ ದೂರಿದೆ.
ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಈ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಇಡಿ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಅಬಕಾರಿ ನೀತಿಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹಿತ ಇಡೀ ಆಮ್‌ಆದ್ಮಿ ಪಕ್ಷವನ್ನು ಆರೋಪಿಗಳು ಎಂದು ಪ್ರಸ್ತಾಪಿಸಿ ಪೂರಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಮದ್ಯ ಮಾರಾಟಗಾರರಿಗೆ ಅನುಕೂಲವಾಗಲಿ ಎಂಬ ದಿಸೆಯಿಂದ ಸಿಎಂ ಅರವಿಂದ್ ಕೇಜ್ರಿವಾಲ್, ಡಿಸಿಎಂ ಮನೀಶ್ ಸಿಸೋಡಿಯಾ ಸೇರಿ ಹಲವು ನಾಯಕರು ಈ ಕಾನೂನನ್ನು ರೂಪಿಸಿದ್ದಾರೆ. ದಕ್ಷಿಣ ಭಾರತ ಹಲವು ವ್ಯಕ್ತಿಗಳು ಇದರ ಲಾಭ ಪಡೆದಿದ್ದು, ಲಾಭದ ಹಣದಲ್ಲಿ ಸ್ವಲ್ಪ ಭಾಗವನ್ನು ಎಎಪಿ ಪಕ್ಷಕ್ಕೆ ನೀಡಿದ್ದಾರೆ. ಬಂದ ಹಣವನ್ನು ಗೋವಾ ಚುನಾವಣೆಗೆ ಬಳಸಲಾಗಿದೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…