ನವದೆಹಲಿ: ದೆಹಲಿಯಲ್ಲಿ ಈ ಬಾರಿ ಬಿಜೆಪಿ 50+ ಸ್ಥಾನ ಗೆಲ್ಲಲಿದೆ ಎಂದು ಟುಡೇಸ್ ಚಾಣಕ್ಯ ಭವಿಷ್ಯ ನುಡಿದಿದೆ.
ನಿನ್ನೆ ತನ್ನ ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸದ ಟುಡೇಸ್ ಚಾಣಕ್ಯ ಇಂದು ಸಂಜೆಯ ವೇಳೆಗೆ ದತ್ತಾಂಶ ಬಿಡುಗಡೆ ಮಾಡಿದೆ.
ಬಿಜೆಪಿ ಮೈತ್ರಿಕೂಟ 51+, ಆಪ್ 19+6, ಇತರರು 0+3 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. ಬಿಜೆಪಿ 49%, ಆಪ್ 41%, ಇತರರು 10% ಮತ ಪಡೆಯಬಹುದು ಎಂದು ತಿಳಿಸಿದೆ.
ದೆಹಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಪ್ರಕಟವಾದ 12 ಸಮೀಕ್ಷೆಗಳಲ್ಲಿ 10 ಸಮೀಕ್ಷೆಗಳು ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರೆ, 2 ಸಮೀಕ್ಷೆಗಳು ಆಪ್ ಜಯಗಳಿಸಲಿದೆ ಎಂದು ತಿಳಿಸಿವೆ.
ಫೆಬ್ರವರಿ.8ರಂದು ದೆಹಲಿ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…