ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಮುಕ್ತಾಯಗೊಳ್ಳುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿವೆ. ಅಚ್ಚರಿಯೆಂದರೆ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
MATRIZE ಸಮೀಕ್ಷೆಯ ಪ್ರಕಾರ ಬಿಜೆಪಿ 35-40, ಆಪ್ 32-37, ಕಾಂಗ್ರೆಸ್ 1 ಸ್ಥಾನ ಗೆಲ್ಲಲಿದೆ ಎಂದು ಹೇಳಿದೆ. ಇನ್ನು ಜೆವಿಸಿ ಸಮೀಕ್ಷೆಯಲ್ಲಿ ಬಿಜೆಪಿ 39-45, ಆಪ್ 22-31, ಕಾಂಗ್ರೆಸ್ 2 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ.
ಒಟ್ಟು 70 ಕ್ಷೇತ್ರಗಳಲ್ಲಿ 699 ಅಭ್ಯರ್ಥಿಗಳು ಕಣದಲ್ಲಿದ್ದು, ಅದೃಷ್ಟ ಪರೀಕ್ಷಿಸಿಕೊಳ್ಳುತ್ತಿದ್ದಾರೆ. ಇದೇ ಫೆಬ್ರವರಿ.8ರಂದು ಫಲಿತಾಂಶ ಹೊರಬೀಳಲಿದೆ.
ಒಂದು ವೇಳೆ ಸಮೀಕ್ಷೆಗಳ ಪ್ರಕಾರ ಬಿಜೆಪಿ ದೆಹಲಿಯ ಚುಕ್ಕಾಣಿ ಹಿಡಿದರೆ 27 ವರ್ಷದ ಬಳಿಕ ಗದ್ದುಗೆ ಏರಿದಂತಾಗುತ್ತದೆ.
ಸಮೀಕ್ಷೆ ಹೊರಬೀಳುತ್ತಿದ್ದಂತೆ ಬಿಜೆಪಿ ನಾಯಕರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದ್ದು, ಆಪ್ ನಾಯಕರು ಎಕ್ಸಿಟ್ ಪೋಲ್‌ಗಳು ಸುಳ್ಳಾಗಲಿವೆ ಎಂದು ಹೇಳುತ್ತಿದ್ದಾರೆ.
ಈ ಎಲ್ಲಾ ಸಮೀಕ್ಷೆಗಳು ನಿಜವಾಗುತ್ತಾ ಅಥವಾ ಸುಳ್ಳಾಗುತ್ತಾ ಎಂಬುದು ಫೆಬ್ರವರಿ.8ರಂದು ಗೊತ್ತಾಗಲಿದೆ.