Mysore
31
clear sky

Social Media

ಶುಕ್ರವಾರ, 07 ಫೆಬ್ರವರಿ 2025
Light
Dark

ಚುನಾವಣಾ ಆಯೋಗ ಬಿಜೆಪಿ ಎದುರು ಶರಣಾಗಿದೆ ಎಂದ ಅರವಿಂದ್‌ ಕೇಜ್ರಿವಾಲ್‌

ನವದೆಹಲಿ: ದೆಹಲಿಯಲ್ಲಿ ರಾಜಕೀಯ ಜಟಾಪಟಿ ದಿನೇ ದಿನೇ ಕಾವೇರುತ್ತಿದ್ದು, ಚುನಾವಣಾ ಆಯೋಗದ ವಿರುದ್ಧವೇ ಅರವಿಂದ್‌ ಕೇಜ್ರಿವಾಲ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅರವಿಂದ್‌ ಕೇಜ್ರಿವಾಲ್‌ ಅವರು, ಬಿಜೆಪಿಯ ದುಷ್ಕೃತ್ಯದ ವಿರುದ್ಧ ಕಾರ್ಯನಿರ್ವಹಿಸಲು ಆಯೋಗ ವಿಫಲವಾಗಿದೆ. ಇದನ್ನೆಲ್ಲಾ ಗಮನಿಸಿದ್ರೆ ಚುನಾವಣಾ ಆಯೋಗ ಅಸ್ತಿತ್ವದಲ್ಲಿಲ್ಲ ಎಂದು ತೋರುತ್ತದೆ. ಇದೊಂದು ರೀತಿಯಲ್ಲಿ ಬಹಳ ದೊಡ್ಡ ಪ್ರಶ್ನೆಯನ್ನು ಹುಟ್ಟು ಹಾಕುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇದೇ ತಿಂಗಳ ಕೊನೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ನಿವೃತ್ತರಾಗುತ್ತಿದ್ದಾರೆ. ನಿವೃತ್ತಿಯ ನಂತರ ಅವರಿಗೆ ರಾಜ್ಯಪಾಲರ ಹುದ್ದೆ ರಾಷ್ಟ್ರಪತಿ ಹುದ್ದೆ ನೀಡಬಹುದು. ಹೀಗಾಗಿ ನಾನು ಅವರನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ. ನಿಮ್ಮ ಕರ್ತವ್ಯವನ್ನು ನಿರ್ವಹಿಸಿ ಯಾವುದೇ ಹುದ್ದೆಯ ದುರಾಸೆಯನ್ನು ಬಿಟ್ಟುಬಿಡಿ ಎಂದು ಮನವಿ ಮಾಡಿದರು.

 

Tags: