ನವದೆಹಲಿ: ದೆಹಲಿಯಲ್ಲಿ ರಾಜಕೀಯ ಜಟಾಪಟಿ ದಿನೇ ದಿನೇ ಕಾವೇರುತ್ತಿದ್ದು, ಚುನಾವಣಾ ಆಯೋಗದ ವಿರುದ್ಧವೇ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿಯ ದುಷ್ಕೃತ್ಯದ ವಿರುದ್ಧ ಕಾರ್ಯನಿರ್ವಹಿಸಲು ಆಯೋಗ ವಿಫಲವಾಗಿದೆ. ಇದನ್ನೆಲ್ಲಾ ಗಮನಿಸಿದ್ರೆ ಚುನಾವಣಾ ಆಯೋಗ ಅಸ್ತಿತ್ವದಲ್ಲಿಲ್ಲ ಎಂದು ತೋರುತ್ತದೆ. ಇದೊಂದು ರೀತಿಯಲ್ಲಿ ಬಹಳ ದೊಡ್ಡ ಪ್ರಶ್ನೆಯನ್ನು ಹುಟ್ಟು ಹಾಕುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದೇ ತಿಂಗಳ ಕೊನೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿವೃತ್ತರಾಗುತ್ತಿದ್ದಾರೆ. ನಿವೃತ್ತಿಯ ನಂತರ ಅವರಿಗೆ ರಾಜ್ಯಪಾಲರ ಹುದ್ದೆ ರಾಷ್ಟ್ರಪತಿ ಹುದ್ದೆ ನೀಡಬಹುದು. ಹೀಗಾಗಿ ನಾನು ಅವರನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ. ನಿಮ್ಮ ಕರ್ತವ್ಯವನ್ನು ನಿರ್ವಹಿಸಿ ಯಾವುದೇ ಹುದ್ದೆಯ ದುರಾಸೆಯನ್ನು ಬಿಟ್ಟುಬಿಡಿ ಎಂದು ಮನವಿ ಮಾಡಿದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…