ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಕೇಂದ್ರ ಗೃಹ ಸಚಿವಾಲಯ ಬಿಗ್ ಶಾಕ್ ನೀಡಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ ಇಡಿಗೆ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಯು 56 ವರ್ಷದ ರಾಜಕಾರಣಿಯ ವಿರುದ್ಧ ಕಳೆದ ವರ್ಷ ಮಾರ್ಚ್‌ನಲ್ಲಿ ಬಂಧಿಸಿದ ನಂತರ ಅವರ ವಿರುದ್ಧ ವಿಶೇಷ ಹಣ ವರ್ಗಾವಣೆ ತಡೆ ಕಾಯ್ದೆ ನ್ಯಾಯಾಲಯದ ಮುಂದೆ ಆರೋಪಪಟ್ಟಿ ಸಲ್ಲಿಸಿದೆ.
ಫೆಬ್ರವರಿ.5ರಂದು ನಿಗದಿಯಾಗಿರುವ ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಈ ಬೆಳವಣಿಗೆ ನಡೆದಿದೆ.
ಇನ್ನು ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ಹಗರಣದ ಪ್ರಮುಖ ಆರೋಪಿ ಹಾಗೂ ಪ್ರಮುಖ ಸಂಚುಕೋರ ಎಂದು ಇಡಿ ಕರೆದಿದೆ.
ಇದರ ಜೊತೆಗೆ ದೆಹಲಿ ಸರ್ಕಾರದ ಸಚಿವರು, ಎಎಪಿ ನಾಯಕರು ಮತ್ತು ಇತರರೊಂದಿಗೆ ಕೇಜ್ರಿವಾಲ್ ಅವರು ಶಾಮೀಲಾಗಿದ್ದಾರೆ ಎಂದು ಇಡಿ ಆರೋಪಿಸಿದೆ.
ಒಟ್ಟಾರೆಯಾಗಿ ದೆಹಲಿ ಚುನಾವಣೆಗೂ ಮುನ್ನವೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಕೇಂದ್ರ ಗೃಹ ಸಚಿವಾಲಯ ಬಿಗ್ ಶಾಕ್ ನೀಡಿದ್ದು, ಇಡಿ ಅಧಿಕಾರಿಗಳು ಈ ವಾರದಲ್ಲೇ ನೋಟಿಸ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಒಂದು ವೇಳೆ ಇಡಿ ಅಧಿಕಾರಿಗಳ ತನಿಖೆಯಿಂದ ಕೇಜ್ರಿವಾಲ್ ವಿರುದ್ಧದ ಆರೋಪ ಸಾಬೀತಾದರೆ, ಚುನಾವಣೆಯ ಮೇಲೆ ಭಾರೀ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.