Mysore
16
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಸಿಖ್‌ ವಿರೋಧಿ ದಂಗೆ| ಸಜ್ಜನ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ: ದೆಹಲಿ ಹೈಕೋರ್ಟ್‌

ನವದೆಹಲಿ: 1984ರಲ್ಲಿ ನಡೆದ ಸಿಖ್‌ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಹತ್ಯೆ ಪ್ರಕರಣವೊಂದರ ಅಪರಾಧಿ ಸಜ್ಜನ್‌ ಕುಮಾರ್‌ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ದೆಹಲಿ ಹೈಕೋರ್ಟ್‌ ತೀರ್ಪು ಪ್ರಕಟಿಸಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.25) ದೆಹಲಿಯ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಅಪರಾಧಿ ಸಜ್ಜನ್‌ ಕುಮಾರ್‌ಗೆ ಶಿಕ್ಷೆ ನೀಡುವ ಬಗ್ಗೆ ಕಾಯ್ದಿರಿಸಿದ್ದ ತೀರ್ಪನ್ನು ವಿಚಾರಣೆ ನಡೆಸಿ ಜೀವಾವಧಿ ಶಿಕ್ಷೆ ನೀಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ಏನಿದು ಪ್ರಕರಣ?

ಸಿಖ್‌ ವಿರೋಧಿ ದಂಗೆಯ ಸಂದರ್ಭದಲ್ಲಿ ಸರಸ್ವತಿ ವಿಹಾರ್‌ ಬಳ ಜಸ್ವಂತ್‌ ಸಿಂಗ್‌ ಹಾಗೂ ಅವರ ಮಗ ತರುಣ್‌ದೀಪ್‌ ಸಿಂಗ್‌ ಅವರನ್ಮು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಜ್ಜನ್‌ ಕುಮಾರ್‌ ಅವರಿಗೆ ಮರಣದಂಡನೆ ವಿಧಿಸುವಂತೆ ಜಸ್ವಂತ್‌ ಅವರ ಪತ್ನಿ ಕೋರಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ದೆಹಲಿ ನ್ಯಾಯಾಲಯವು ಫೆ.12 ರಂದು ಸಜ್ಜನ್‌ ಕುಮಾರ್‌ ಅವರು ಪ್ರಕರಣದ ಅಪರಾಧಿ ಎಂದು ಪರಿಗಣಿಸಿ ತೀರ್ಪು ನೀಡಿತ್ತು. ಆದರೆ ಆ ತೀರ್ಪಿನಲ್ಲಿ ಶಿಕ್ಷೆಯನ್ನು ಕಾಯ್ದಿರಿಸಿದ ಕೋರ್ಟ್‌ ತಿಹಾರ್‌ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಸಜ್ಜನ್‌ ಕುಮಾರ್‌ ಅವರ ಮಾನಸಿಕ ಸ್ಥಿತಿಯ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿತ್ತು. ಅಧಿಕಾರಿಗಳು ವರದಿ ಸಲ್ಲಿಸಿದ ಬಳಿಕ ಇಂದು ಅಂತಿಮವಾಗಿ ಜೀವಾವಧಿ ಶಿಕ್ಷೆ ಘೋಷಣೆ ಮಾಡಿದೆ.

Tags:
error: Content is protected !!