ನವದೆಹಲಿ: 1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಹತ್ಯೆ ಪ್ರಕರಣವೊಂದರ ಅಪರಾಧಿ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ದೆಹಲಿ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.25) ದೆಹಲಿಯ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಅಪರಾಧಿ ಸಜ್ಜನ್ ಕುಮಾರ್‌ಗೆ ಶಿಕ್ಷೆ ನೀಡುವ ಬಗ್ಗೆ ಕಾಯ್ದಿರಿಸಿದ್ದ ತೀರ್ಪನ್ನು ವಿಚಾರಣೆ ನಡೆಸಿ ಜೀವಾವಧಿ ಶಿಕ್ಷೆ ನೀಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
ಏನಿದು ಪ್ರಕರಣ?
ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ಸರಸ್ವತಿ ವಿಹಾರ್ ಬಳ ಜಸ್ವಂತ್ ಸಿಂಗ್ ಹಾಗೂ ಅವರ ಮಗ ತರುಣ್‌ದೀಪ್ ಸಿಂಗ್ ಅವರನ್ಮು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರಿಗೆ ಮರಣದಂಡನೆ ವಿಧಿಸುವಂತೆ ಜಸ್ವಂತ್ ಅವರ ಪತ್ನಿ ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ದೆಹಲಿ ನ್ಯಾಯಾಲಯವು ಫೆ.12 ರಂದು ಸಜ್ಜನ್ ಕುಮಾರ್ ಅವರು ಪ್ರಕರಣದ ಅಪರಾಧಿ ಎಂದು ಪರಿಗಣಿಸಿ ತೀರ್ಪು ನೀಡಿತ್ತು. ಆದರೆ ಆ ತೀರ್ಪಿನಲ್ಲಿ ಶಿಕ್ಷೆಯನ್ನು ಕಾಯ್ದಿರಿಸಿದ ಕೋರ್ಟ್ ತಿಹಾರ್ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಸಜ್ಜನ್ ಕುಮಾರ್ ಅವರ ಮಾನಸಿಕ ಸ್ಥಿತಿಯ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿತ್ತು. ಅಧಿಕಾರಿಗಳು ವರದಿ ಸಲ್ಲಿಸಿದ ಬಳಿಕ ಇಂದು ಅಂತಿಮವಾಗಿ ಜೀವಾವಧಿ ಶಿಕ್ಷೆ ಘೋಷಣೆ ಮಾಡಿದೆ.
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…
ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…