ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಕುಂಠಿತಗೊಂಡಿದ್ದು, ದಟ್ಟ ಮಂಜು ಆವರರಿಸಿಕೊಂಡಿದೆ. ಈ ಹಿನ್ನೆಲೆ ರೈಲು, ವಿಮಾನ ಸಂಚಾರದಲ್ಲಿ ವಿಳಂಬವಾಗಿ ವ್ಯತ್ಯಯ ಉಂಟಾಗಿದೆ.
ಇಂದು(ಜನವರಿ.13) ಭಾರತೀಯ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಅನ್ನು ಘೋಷಿಸಿದ್ದು, ಹವಾಮಾನ ವೈಪರೀತ್ಯದ ಕಾರಣ ಕಡಿಮೆ ಗೋಚರತೆಯಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಅಲ್ಲದೇ ರೈಲು ಸಂಚಾರದಲ್ಲಿಯೂ ಸಮಯಗಳ ಬದಲಾವಣೆಯಾಗಿದ್ದು, ಕೆಲವು ರೈಲುಗಳನ್ನು ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಇತ್ತೀಚೆಗೆ ತಾಪಮಾನ ಕುಂಠಿತವಾಗುತ್ತಿದ್ದು, ಕನಿಷ್ಠ ತಾಪಮಾನ 9.6 ಡಿಗ್ರಿ ಸೆಲ್ಸಿಯಸ್ ಇದೆ. ಆದರೆ ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ಗೆ ಏರುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆಯೂ ತನ್ನ ವರದಿಯಲ್ಲಿ ಹೇಳಿದೆ.
ಇನ್ನೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶದ ಪ್ರಕಾರ ದೆಹಲಿಯ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆ ಗುಣಮಟ್ಟದಲ್ಲಿದೆ. ಇಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ವಾಯು ಗುಣಮಟ್ಟ ಸ್ಯೂಚಂಕ 274ರಷ್ಟಿತ್ತು ಎಂದು ತಿಳಿಸಿದೆ.





