ದೇಶ- ವಿದೇಶ

ಅಸಾದುದ್ದೀನ್‌ ಓವೈಸಿ ಮನೆ ಧ್ವಂಸ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ದಾಖಲು

ನವದೆಹಲಿ: ಎರಡು ದಿನಗಳ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ಅಧಿಕೃತ ನಿವಾಸದ ಹೊರಗೆ ನಾಮಫಲಕ ಧ್ವಂಸ ಬಗ್ಗೆ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್‌ ಸಂಸದ ಅಸಾದುದ್ದೀನ್‌ ಓವೈಸಿ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಬಲಪಂಥೀಯ ಸಂಘಟನೆಗಳ ಸದಸ್ಯರು ಎನ್ನಲಾದ ಕೆಲವು ಅಪರಿಚಿತ ದುಷ್ಕರ್ಮಿಗಳು ಗುರುವಾರ ದೆಹಲಿಯ ಲುಟೈನ್‌ನ ಅಶೋಕ ರಸ್ತೆಯಲ್ಲಿರುವ ಓವೈಸಿ ನಿವಾಸದ ಹೊರಗೆ ಇರುವ ಸಂಸದರ ನಾಮಫಲಕಕ್ಕೆ ಕಪ್ಪು ಬಣ್ಣ ಬಳಿದಿದ್ದಾರೆ.

ದೆಹಲಿ ಪೊಲೀಸ್‌ ಅಧಿಕಾರಿಯ ಪ್ರಕಾರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 147, 506 ಮತ್ತು 153ರ ಅಡಿಯಲ್ಲಿ ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಗಮನಾರ್ಹವೆಂದರೆ, ಓವೈಸಿ ಅವರ ಮನೆ ಮೇಲೆ ದಾಳಿ ನಡೆದಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ದೆಹಲಿ ಪೊಲೀಸ್‌ ಪ್ರಧಾನ ಕಚೇರಿಯ ಎದುರು ಇರುವ ಹೈದರಾಬಾದ್‌ ಸಂಸದರ ನಿವಾಸವು ಬಲಪಂಥೀಯ ಸಂಘಟನೆಗಳ ಸದಸ್ಯರಿಂದ ವಿಧ್ವಂಸಕ ಕೃತ್ಯಗಳಿಗೆ ಒಳಗಾಗಿತ್ತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

34 mins ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

47 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

1 hour ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

2 hours ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago