ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.
ಉಮ್ಮತ್ತೂರು ಗ್ರಾಮದ ವರ್ಷ ಹಾಗೂ ಸಂತೇಮರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತೆಳ್ಳನೂರು ಗ್ರಾಮದ ತಾಯಮಣಿ ಆಯ್ಕೆ ಯಾದ ಮಹಿಳೆಯರು. ಪ್ರಧಾನಿ ನರೇಂದ್ರ ಮೋದಿ ಅವರು ನಡೆಸುವ ಮನ್‌ಕೀ ಬಾತ್ ಕಾರ್ಯಕ್ರಮದಿಂದ ಪ್ರೇರಣೆಗೊಂಡ ವರ್ಷಾ ಅವರು ಬಾಳೆ ದಿಂಡಿನಲ್ಲಿ ಕರ ಕುಶಲ ವಸ್ತುಗಳನ್ನು ತಯಾರಿಸಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಹಾಗೆಯೇ, ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿಗಳ ಪೈಕಿ ವಿಶೇಷವಾಗಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ಹೆಚ್ಚಿನ ಕುಟುಂಬಗಳಿರುವ ಸಂತೇಮರಹಳ್ಳಿ ಗ್ರಾಪಂ ಅಧ್ಯಕ್ಷೆ ತಾಯಮಣಿ ಆಯ್ಕೆಯಾಗಿದ್ದಾರೆ.





