ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ `ಪ್ಯಾರಿ ದೀದಿʼ ಗ್ಯಾರಂಟಿ ಯೋಜನೆ ಜಾರಿಗೊಳಿಸುವುದಾಗಿ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯದ ಮಾದರಿಯಲ್ಲೇ ದೆಹಲಿಯ ಮಹಿಳೆಯರಿಗೆ ʻಪ್ಯಾರಿ ದೀದಿʼ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 2500 ರೂ. ನೀಡುತ್ತೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ತಕ್ಷಣವೇ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಒಪ್ಪಿಗೆ ನೀಡಲಾಯಿತು. ಕರ್ನಾಟಕದ ಇದೇ ಮಾದರಿಯಲ್ಲಿ ದೆಹಲಿಯ ಜನತೆಗೆ ಗ್ಯಾರಂಟಿ ಯೋಜನೆಯನ್ನು ಅನಾವರಣಗೊಳಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ದೆಹಲಿಯ ಜನತೆಗೆ ನೀಡಲಿರುವ ಗ್ಯಾರಂಟಿ ಯೋಜನೆಯನ್ನು ಅನಾವರಣಗೊಳಿಸಿದರು.





