ದೇಶ- ವಿದೇಶ

ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್‌ ನಿರ್ಧಾರ: ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್‌ ದೇವ್‌

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಗೆಲುವು ಸಾಧಿಸಿದೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್‌ ದೇವ್‌ ಅವರು, ದೆಹಲಿಯಲ್ಲಿ ಯಾರು ಸಿಎಂ ಆಗಬೇಕು ಎಂಬುದನ್ನು ಕೇಂದ್ರ ನಾಯಕತ್ವ ನಿರ್ಧರಿಸಲಿದೆ ಎಂದರು.

ಇಲ್ಲಿಯವರೆಗಿನ ಫಲಿತಾಂಶಗಳು ನಮ್ಮ ನಿರೀಕ್ಷೆಯಂತೆಯೇ ಇವೆ. ಹೀಗಿದ್ದೂ ನಾವು ಅಂತಿಮ ಫಲಿತಾಂಶದವರೆಗೂ ಕಾಯುತ್ತೇವೆ ಎಂದು ತಿಳಿಸಿದರು.

ಬಿಜೆಪಿಯ ಅಭ್ಯರ್ಥಿಗಳು ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಿದರು ಹಾಗೂ ದಿಲ್ಲಿಯ ಮತದಾರರು ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಆಯ್ಕೆ ಮಾಡಿಕೊಂಡರು. ದಿಲ್ಲಿಯ ಜನತೆಗೆ ಅಭಿವೃದ್ಧಿಯ ಮಾದರಿ ಬೇಕಿದ್ದರಿಂದ ಅವರೆಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪ್ರತಿಪಾದಿಸಿದರು.

ದಿಲ್ಲಿಯಲ್ಲಿ ಬಿಜೆಪಿ ಡಬಲ್‌ ಇಂಜಿನ್‌ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಈ ಫಲಿತಾಂಶವು ಪ್ರಧಾನಿ ಮೋದಿಯ ದೂರದೃಷ್ಟಿಯ ಫಲ ಎಂದು ಹೇಳಲು ನಮಗೆ ಯಾವುದೇ ಮುಜುಗರವಿಲ್ಲ. ದಿಲ್ಲಿಯು ಸುಭದ್ರ ಹಾಗೂ ಸ್ಥಿರ ಸರ್ಕಾರ ಪಡೆಯುವುದನ್ನು ನಾವು ಖಾತರಿಪಡಿಸುತ್ತೇವೆ ಎಂದು ಭರವಸೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

1 hour ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

2 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

3 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

15 hours ago