ದೇಶ- ವಿದೇಶ

ದೆಹಲಿ | ಸ್ಲೀಪರ್‌ ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ : ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ.

ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ ಪ್ರಕರಣ ದಾಖಲಿಸಿಕೊಂಡು ಬಸ್ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ ಬಂಧಿಸಿದ್ದೇವೆ. ಘಟನೆ ಮೇ 12 ರಂದು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಂದಿನಂತೆ ಕೆಲಸ ಮುಗಿಸಿ ಮಹಿಳೆ ಸರಸ್ವತಿ ವಿಹಾರ್ ಬಿ-ಬ್ಲಾಕ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಒಂದು ಸ್ಲೀಪರ್ ಬಸ್ ಆಕೆಯ ಪಕ್ಕ ನಿಂತಿತ್ತು. ಬಸ್ಸಿನ ಬಾಗಿಲ ಬಳಿ ನಿಂತಿದ್ದ ಕಂಡಕ್ಟರ್ ಬಳಿ ಮಹಿಳೆ ಸಮಯ ಕೇಳಲೆಂದು ಧಾವಿಸಿದ ವೇಳೆ ಆಕೆಯನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿದೆ.

ದೆಹಲಿಯ ರಾಣಿಬಾಗ್ ಪ್ರದೇಶದಲ್ಲಿ ಕೃತ್ಯ ನಡೆದಿದ್ದು, ಸುಮಾರು 7 ಕಿ.ಮೀವರೆಗೆ ಬಸ್ ಚಲಿಸುತ್ತಲೇ ಇತ್ತು. ತಡರಾತ್ರಿ 2 ಗಂಟೆಯ ಸುಮಾರಿಗೆ ಮಹಿಳೆಯನ್ನು ಬಸ್ಸಿನಿಂದ ಹೊರದಬ್ಬಿದ್ದಾರೆ. ಇದರಿಂದ ಮಹಿಳೆಗೆ ಗಾಯಗಳಾಗಿವೆ. ಸದ್ಯ ಘಟನೆ ಕುರಿತು ಹೆಚ್ಚಿನ ತನಿಖೆಗಾಗಿ ಕೃತ್ಯಕ್ಕೆ ಬಳಸಿದ ಬಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

10 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

11 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

13 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

13 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

17 hours ago