ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಜನಶಕ್ತಿಯೇ ಸರ್ವಶ್ರೇಷ್ಠ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಗೆಲ್ಲುತ್ತದೆ.
ಬಿಜೆಪಿಗೆ ಈ ಅದ್ಭುತ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರಿಗೆ ನಾನು ನಮಸ್ಕರಿಸುತ್ತೇನೆ. ಈ ಆಶೀರ್ವಾದಗಳನ್ನು ಸ್ವೀಕರಿಸಲು ನಮಗೆ ವಿನಮ್ರತೆ ಮತ್ತು ಗೌರವವಿದೆ.
ದೆಹಲಿಯನ್ನು ಅಭಿವೃದ್ಧಿಪಡಿಸುವಲ್ಲಿ, ಜನರ ಒಟ್ಟಾರೆ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಮತ್ತು ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ದೆಹಲಿಗೆ ಪ್ರಮುಖ ಪಾತ್ರವಿದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ ಎಂಬುದು ನಮ್ಮ ಭರವಸೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.





