ದೇಶ- ವಿದೇಶ

ಅತ್ಯಂತ ಕಳಪೆ ಮಟ್ಟದಲ್ಲೇ ಉಳಿದ ದೆಹಲಿಯ ವಾಯು ಗುಣಮಟ್ಟ

ನವದೆಹಲಿ: ಇಂದು ಕೂಡ ದೆಹಲಿಯ ವಾಯು ಗುಣಮಟ್ಟ ಅತ್ಯಂತ ಕಳಪೆಯಾಗಿದ್ದು, ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿಯಿಲ್ಲ ಎಂದು ವರದಿ ಹೇಳಿದೆ.

ದೆಹಲಿಯ ಕನಿಷ್ಠ ತಾಪಮಾನ 11.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಗರಿಷ್ಠ ತಾಪಮಾನ 28.2 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆಯಿದೆ ಎಂದು ಹೇಳಿದೆ.

ಇದನ್ನು ಓದಿ: ದೆಹಲಿಯಲ್ಲಿ ವಾಯುಮಾಲಿನ್ಯ ತಡೆಯಲು ಸರ್ಕಾರ ಕ್ರಮ

ಭೂಮಿ ವಿಜ್ಞಾನ ಸಚಿವಾಲಯದ ವಾಯು ಗುಣಮಟ್ಟ ಮುನ್ಸೂಚನಾ ವ್ಯವಸ್ಥೆಯ ಪ್ರಕಾರ, ಮುಂದಿನ ಆರು ದಿನಗಳವರೆಗೆ ದೆಹಲಿಯ ವಾಯು ಗುಣಮಟ್ಟವು ಅತ್ಯಂತ ಕಳಪೆಯಿಂದ ಅತ್ಯಂತ ಗಂಭೀರ ವರ್ಗದಲ್ಲಿಯೇ ಮುಂದುವರಿಯುವ ಸಾಧ್ಯತೆಯಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು ಎಂದು ನಿರೀಕ್ಷಿಸಲಾಗಿದೆ.

ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌, ನವೆಂಬರ್‌ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಅನುಮತಿಸುವುದು ಶಾಲಾ ಮಕ್ಕಳನನು ವಿಷಾನಿಲ ಕೊಠಡಿಯಲ್ಲಿ ಇಟ್ಟಂತೆ ಎಂದು ಅಭಿಪ್ರಾಯಪಟ್ಟಿದೆ.

ಆಂದೋಲನ ಡೆಸ್ಕ್

Recent Posts

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

50 mins ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

1 hour ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

1 hour ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

2 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

2 hours ago

ಗೋ ಬ್ಯಾಕ್‌ ಗವರ್ನರ್‌ ಅನ್ನೋದು ರಾಜಕೀಯ ನಾಟಕ : ಎಚ್‌.ಡಿ.ಕುಮಾರಸ್ವಾಮಿ ಆರೋಪ

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…

2 hours ago