Mysore
16
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಕದನ ವಿರಾಮ ಘೋಷಣೆಯಾದರೂ ಮುಂದುವರೆಯಲಿದೆ ಸಿಂಧೂ ಜಲ ಒಪ್ಪಂದ ಅಮಾನತು

ನವದೆಹಲಿ: ಕಳೆದ ಒಂದು ವಾರದಿಂದ ನಡೆದಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯೊಂದಿಗೆ ಅಂತ್ಯವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆಯು ಕದನ ವಿರಾಮಕ್ಕೆ ಪೂರ್ವ ಅಥವಾ ನಂತರದ ಯಾವುದೇ ಷರತ್ತುಗಳಿಲ್ಲ. ಬದಲಿಗೆ ಪಾಕಿಸ್ತಾನದಿಂದಲೇ ಈ ಕದನ ವಿರಾಮಕ್ಕೆ ಕರೆ ಬಂದಿದೆ ಎಂದು ಹೇಳಿದೆ.

ಈ ಮಧ್ಯೆ ಸೇನಾ ಸಂಘರ್ಷಕ್ಕೂ ಮುನ್ನ ಭಾರತ ಘೋಷಿಸಿದ್ದ ಸಿಂಧೂ ಜಲ ಒಪ್ಪಂದ ಅಮಾನತು ಮುಂದುವರೆಯಲಿದೆ ಎಂದು ಸ್ಪಷ್ಟನೆ ನೀಡಿದೆ.

ಇನ್ನು ಉಭಯ ದೇಶಗಳ ಡಿಜಿಎಂಒಗಳು ಮೇ.12ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

Tags:
error: Content is protected !!