Mysore
26
scattered clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಬಿಸಿಸಿಐನ ನೂತನ ಕಾರ್ಯದರ್ಶಿಯಾಗಿ ದೇವಜಿತ್‌ ಸೈಕಿಯಾ ನೇಮಕ

ಮುಂಬೈ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್‌ ಸೈಕಿಯಾ ನೇಮಕವಾಗಿದ್ದಾರೆ.

ಐಸಿಸಿಯ ಅಧ್ಯಕ್ಷ ಜಯ್‌ ಶಾ ಅವರಿಂದ ತೆರವಾದ ಸ್ಥಾನಕ್ಕೆ ಸೈಕಿಯಾ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಇಂದು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಟೀ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ಕೋಚ್‌ ಗೌತಮ್‌ ಗಂಭೀರ್‌ ಜೊತೆ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಸಭೆಯಲ್ಲಿ ಇತ್ತಿಚೀನ ದಿನಗಳ ಟೂರ್ನಿಗಳಲ್ಲಿ ಟೀ ಇಂಡಿಯಾದ ಕಳಪೆ ಪ್ರದರ್ಶನಕ್ಕೆ ಕಾರಣ ಏನೆಂಬುದನ್ನು ಚರ್ಚಿಸಲಾಗಿದೆ. ಜೊತೆಗೆ ಮುಂದಿನ ಸವಾಲುಗಳ ಸಿದ್ದತೆಯ ಬಗ್ಗೆಯೂ ಮಾತುಕತೆ ನಡೆಸಲಾಗಿದೆ.

ಸೈಕಿಯಾ ಅಸ್ಸಾಂ ಮೂಲದ ಮಾಜಿ ಕ್ರಿಕೆಟಿಗ. 1990-91 ರ ನಡುವೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 4 ಪಂದ್ಯಗಳನ್ನು ಆಡಿರುವ ಸೈಕಿಯಾ ಒಟ್ಟು 53 ರನ್‌ಗಳಿಸಿ 9 ವಿಕೆಟ್‌ ಪಡೆದಿದ್ದರು. ಬಳಿಕ ಕಾನೂನು ವೃತ್ತಿಯಲ್ಲಿ ತೊಡಗಿ ಗುವಾಹಟಿ ಹೈಕೋರ್ಟ್‌ನಲ್ಲಿ ವಕೀಲರಾಗಿ ಅಭ್ಯಾಸ ಮಾಡಿದ್ದಾರೆ. ಇದಕ್ಕೂ ಮುಂಚೆ ಸ್ಪೋರ್ಟ್ಸ್‌ ಕೋಟಾದಡಿ ಉತ್ತರ ಗಡಿನಾಡು ರೈಲ್ವೆ ಮತ್ತು ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ನಲ್ಲಿ ಸೇವೆ ಸಲ್ಲಿಸಿದ್ದರು.

ಪುನಃ 2019ರಲ್ಲಿ ಕ್ರೀಡಾಲೋಕಕ್ಕೆ ಮರಳಿದ ಸೈಕಿಯಾ, ಅಸ್ಸಾಂ ಕ್ರಿಕೆಟ್‌ ಅಸೋಸಿಯೇಷನ್‌ (ACA)ನ ಉಪಾಧ್ಯಕ್ಷರಾಗಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದಾದ ನಂತರ 2022ರಲ್ಲಿ ಬಿಸಿಸಿಐನ ಜಂಟಿ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸಿದ್ದರು.

 

Tags:
error: Content is protected !!