ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್ ಸೈಕಿಯಾ ನೇಮಕವಾಗಿದ್ದಾರೆ.
ಐಸಿಸಿಯ ಅಧ್ಯಕ್ಷ ಜಯ್ ಶಾ ಅವರಿಂದ ತೆರವಾದ ಸ್ಥಾನಕ್ಕೆ ಸೈಕಿಯಾ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಇಂದು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಟೀ ಇಂಡಿಯಾ ನಾಯಕ ರೋಹಿತ್ ಶರ್ಮಾ, ಕೋಚ್ ಗೌತಮ್ ಗಂಭೀರ್ ಜೊತೆ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಸಭೆಯಲ್ಲಿ ಇತ್ತಿಚೀನ ದಿನಗಳ ಟೂರ್ನಿಗಳಲ್ಲಿ ಟೀ ಇಂಡಿಯಾದ ಕಳಪೆ ಪ್ರದರ್ಶನಕ್ಕೆ ಕಾರಣ ಏನೆಂಬುದನ್ನು ಚರ್ಚಿಸಲಾಗಿದೆ. ಜೊತೆಗೆ ಮುಂದಿನ ಸವಾಲುಗಳ ಸಿದ್ದತೆಯ ಬಗ್ಗೆಯೂ ಮಾತುಕತೆ ನಡೆಸಲಾಗಿದೆ.
ಸೈಕಿಯಾ ಅಸ್ಸಾಂ ಮೂಲದ ಮಾಜಿ ಕ್ರಿಕೆಟಿಗ. 1990-91 ರ ನಡುವೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 4 ಪಂದ್ಯಗಳನ್ನು ಆಡಿರುವ ಸೈಕಿಯಾ ಒಟ್ಟು 53 ರನ್‌ಗಳಿಸಿ 9 ವಿಕೆಟ್ ಪಡೆದಿದ್ದರು. ಬಳಿಕ ಕಾನೂನು ವೃತ್ತಿಯಲ್ಲಿ ತೊಡಗಿ ಗುವಾಹಟಿ ಹೈಕೋರ್ಟ್‌ನಲ್ಲಿ ವಕೀಲರಾಗಿ ಅಭ್ಯಾಸ ಮಾಡಿದ್ದಾರೆ. ಇದಕ್ಕೂ ಮುಂಚೆ ಸ್ಪೋರ್ಟ್ಸ್ ಕೋಟಾದಡಿ ಉತ್ತರ ಗಡಿನಾಡು ರೈಲ್ವೆ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ ಸೇವೆ ಸಲ್ಲಿಸಿದ್ದರು.
ಪುನಃ 2019ರಲ್ಲಿ ಕ್ರೀಡಾಲೋಕಕ್ಕೆ ಮರಳಿದ ಸೈಕಿಯಾ, ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ (ACA)ನ ಉಪಾಧ್ಯಕ್ಷರಾಗಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದಾದ ನಂತರ 2022ರಲ್ಲಿ ಬಿಸಿಸಿಐನ ಜಂಟಿ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸಿದ್ದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…