dharmastal case
ಹೊಸದಿಲ್ಲಿ : ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಕರ್ನಾಟಕದ ಧರ್ಮಸ್ಥಳದ ನಡೆದಿದೆ ಎನ್ನಲಾದ ನಿಗೂಢ ಸಾವು, ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ಒತ್ತಾಯಿಸುಬೇಕು ಎಂದು ಒತ್ತಾಯಿಸಿ ಕರ್ನಾಟಕ ಸಂತರ ನಿಯೋಗವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಹೊಸದಿಲ್ಲಿಯಲ್ಲಿ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನಿಯೋಗವು ಭೇಟಿಯಾಗಿ ಮನವಿ ಸಲ್ಲಿಸಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಚರ್ಚೆಯಲ್ಲಿ, ಸ್ವಾಮೀಜಿಗಳು ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಕುರಿತು ವಿವರವಾಗಿ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳವು ಲಕ್ಷಾಂತರ ಭಕ್ತರ ಆಧ್ಯಾತ್ಮಿಕ ಕೇಂದ್ರವಾಗಿದ್ದು, ಇದರ ವಿರುದ್ಧ ಯೋಜಿತ ರೀತಿಯಲ್ಲಿ ಷಡ್ಯಂತ್ರ ನಡೆಯುತ್ತಿದೆ. ಶಬರಿಮಲೆ ಮತ್ತು ತಿರುಪತಿಯಂತಹ ಇತರ ಪವಿತ್ರ ಧಾರ್ಮಿಕ ಕ್ಷೇತ್ರಗಳ ಬಳಿಕ, ಈಗ ಧರ್ಮಸ್ಥಳವನ್ನು ಗುರಿಯಾಗಿಸಲಾಗಿದೆ. ಹಿಂದೂ ಧರ್ಮ ಕ್ಷೇತ್ರಗಳನ್ನು ಸಂಶಯದಿಂದ ನೋಡುವಂತೆ ಮಾಡುವ ಷಡ್ಯಂತ್ರವಿದು. ಜನರು ದೇವಸ್ಥಾನಗಳಿಗೆ ಹೋಗದಂತೆ ತಡೆಯುವ ದುರುದ್ದೇಶ ಇದರ ಹಿಂದಿದೆ ಎಂದು ನಿಯೋಗವು ಬೇಸರ ಹೊರಹಾಕಿದರು.
ಇದನ್ನು ಓದಿ:ಭಾರತದ ಎಲ್ಲಾ ರಾಜ್ಯಗಳಿಗೂ ಮೈಸೂರಿನಿಂದ ರೈಲು ಓಡಿಸುವ ಯೋಜನೆ: ಸಚಿವ ವಿ.ಸೋಮಣ್ಣ
ನಿಯೋಗದ ಮನವಿಯನ್ನು ಸಹನೆಯಿಂದಲೇ ಆಲಿಸಿದ ಅಮಿತ್ ಶಾ, ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಕೇಂದ್ರ ಸರ್ಕಾರವು ಈ ವಿಷಯದಲ್ಲಿ ಗಂಭೀರವಾಗಿ ಕ್ರಮ ಕೈಗೊಳ್ಳಲಿದೆ. ಧರ್ಮಸ್ಥಳ ಪ್ರಕರಣದ ಬಗ್ಗೆ ಸಚಿವ ಸಂಪುಟ ಸಭೆ ನಡೆಸಲಿದೆ. ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ. ನೀವು ಸಮಾಜವನ್ನು ಜಾಗೃತಿಗೊಳಿಸಿ ತಿಳಿಸಿದ್ದಾರೆ.
ಧರ್ಮಸ್ಥಳದ ಬಾಹುಬಲಿ ಬೆಟ್ಟದವರೆಗೆ ತಲುಪಿರುವ ಉತ್ಖನನ ಕಾರ್ಯಾಚರಣೆಯ ಬಗ್ಗೆ ಸ್ವಾಮೀಜಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಈ ಉತ್ಖನನವು ಶ್ರೀ ಕ್ಷೇತ್ರ ಧರ್ಮಸ್ಥಳದ ಆಧ್ಯಾತ್ಮಿಕ ಮಹತ್ವವನ್ನು ಕೆಡವುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಈ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಆರೋಪಿಸಿದ ಸ್ವಾಮೀಜಿಗಳು, ಈ ಷಡ್ಯಂತ್ರದ ಸತ್ಯಾಂಶವನ್ನು ಬಯಲಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನು ಓದಿ:ಮೈಸೂರು| ಪರಮೇಶ್ವರ್‌ಗೆ ಮುಂದೆ ಅತ್ಯುನ್ನತ ರಾಜಕೀಯ ಸ್ಥಾನಮಾನ ಸಿಗಲಿ: ಎಚ್.ಎ.ವೆಂಕಟೇಶ್
ಪಂಚಮಸಾಲಿ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ ನೇತೃತ್ವದ ಈ ನಿಯೋಗದಲ್ಲಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಪೀಠಗಳ ಒಟ್ಟು ಎಂಟು ಸ್ವಾಮೀಜಿಗಳು ಇದ್ದರು. ಈ ಭೇಟಿಯ ಸಂದರ್ಭದಲ್ಲಿ, ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಮತ್ತು ಅಪಪ್ರಚಾರದ ಕುರಿತು ಸುದೀರ್ಘ ಚರ್ಚೆ ನಡೆದಿದೆ ಎಂಬುದನ್ನು ನಿಯೋಗವು ಮನವರಿಕೆ ಮಾಡಿಕೊಟ್ಟಿತು.
ಸ್ವಾಮೀಜಿಗಳ ನಿಯೋಗ ನೇರವಾಗಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದು ಪ್ರಕರಣವನ್ನು ಎನ್‌ಐಎಗೆ ವಹಿಸುವ ಸಾಧ್ಯತೆಯನ್ನು ಹೆಚ್ಚಿಸಿದೆ.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…