ತಿರುವನಂತಪುರಂ : ಇಡೀ ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಪ್ರಕರಣ ಸಂಬಂಧ ಕೇರಳದ ಕಮ್ಯುನಿಸ್ಟ್(ಸಿಪಿಐ) ಪಕ್ಷದ ಸಂಸದರೊಬ್ಬರ ಹೆಸರು ತಳುಕು ಹಾಕಿಕೊಂಡಿದೆ. ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸದಸ್ಯ ಸಂತೋಷ್‌ಕುಮಾರ್ ಅವರೇ ತಲೆಬುರುಡೆಯನ್ನು ಪ್ರಕರಣದ ಪ್ರಮುಖ ಆರೋಪಿ ಪ್ರಸ್ತುತ ಎಸ್‌ಐಟಿ ವಶದಲ್ಲಿರುವ ಚಿನ್ನಯ್ಯ ಅವರಿಗೆ ತಂದುಕೊಟ್ಟಿದ್ದರು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.
ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ಟಿ.ಜಯಂತ್ ಅವರು ತಿರುವಂತನಪುರಕ್ಕೆ ತೆರಳಿ ರಾಜ್ಯಸಭಾ ಸದಸ್ಯರೂ ಆಗಿರುವ ಸಂತೋಷ್‌ಕುಮಾರ್ ಅವರನ್ನು ಭೇಟಿಯಾಗಿ ತಲೆಬುರುಡೆ ಪ್ರಕರಣದ ಬಗ್ಗೆ ಯಾವ ಯಾವ ತಂತ್ರಗಳನ್ನು ರೂಪಿಸಬೇಕು ಎಂಬುದರ ಬಗ್ಗೆ ರಹಸ್ಯ ಸ್ಥಳವೊಂದರಲ್ಲಿ ಚರ್ಚೆ ನಡೆಸಿದ್ದರು.
ಎಸ್‌ಐಟಿ ವಶದಲ್ಲಿರುವ ಚಿನ್ನಯ್ಯ ಹಾಗೂ ವಿಚಾರಣೆಗೆ ಹಾಜರಾಗಿದ್ದ ಗಿರೀಶ್ ಮಟ್ಟಣ್ಣವರ್, ಜಯಂತ್, ಮಹೇಶ್ ಶೆಟ್ಟಿ ತಿಮರೋಡಿ ಅವರ ವಿಚಾರಣೆ ವೇಳೆ ಈ ಪ್ರಕರಣದ ಮಾಸ್ಟರ್ ಮೈಂಡ್ ಸಂತೋಷ್‌ಕುಮಾರ್ ಎಂಬುದನ್ನು ಬಹಿರಂಗಪಡಿಸಿದ್ದಾರೆ.
ಹೊಸದಿಲ್ಲಿಗೂ ತೆರಳಿದ್ದ ಈ ತಂಡವು ಸಂಸದರನ್ನು ಭೇಟಿಯಾಗಿ ಧರ್ಮಸ್ಥಳದಲ್ಲಿ ಕಳೆದ ಹಲವಾರು ವರ್ಷದಿಂದ ಶವಗಳನ್ನು ಹೂತು ಹಾಕಿದ್ದೇನೆ. ಈಗ ನನಗೆ ಇದರ ಪಾಪಪ್ರಜ್ಞೆ ಕಾಡುತ್ತಿದೆ. ಪೊಲೀಸರು ತನಿಖೆ ನಡೆಸಿದರೆ ಎಲ್ಲವನ್ನೂ ಬಾಯಿ ಬಿಡುವುದಾಗಿ ಹೇಳುವಂತೆ ಚಿನ್ನಯ್ಯನ ತಲೆಗೆ ತುಂಬಿದ್ದು ಈ ತಂಡ ಎನ್ನಲಾಗಿದೆ.
ನಾನು ತಂಡ ಹೇಳಿದಂತೆ ಕೇಳಿದ್ದೆ. ಇದರಲ್ಲಿ ನನ್ನ ಪಾತ್ರವೇನಿಲ್ಲ ಎಂದು ಕಟಕಟೆಯಲ್ಲಿ ಕಣ್ಣೀರು ಹಾಕಿದ್ದ ಚಿನ್ನಯ್ಯ ತನಗೆ ಯಾವ ರೀತಿ ಆಮಿಷವೊಡ್ಡಿದರು, ತಲೆಬುರಡೆಯನ್ನು ತಂದಿದ್ದು ಎಲ್ಲಿಂದ? ದಿಲ್ಲಿಯಲ್ಲಿ ಭೇಟಿಯಾಗಿದ್ದು ಯಾರನ್ನು? ತಿರುವಂತನಪುರದಲ್ಲಿ ಭೇಟಿಯಾಗಿದ್ದು ಸೇರಿದಂತೆ ಹಲವು ವಿಷಯಗಳನ್ನು ಬಾಯಿಬಿಟ್ಟಿದ್ದಾನೆ.
ಇದೀಗ ಎಸ್‌ಐಟಿ ಅಽಕಾರಿಗಳು ಪ್ರಕರಣದ ಮಾಸ್ಟರ್ ಮೈಂಡ್ ಎಂದೇ ಆರೋಪಿಸಿರುವ ರಾಜ್ಯಸಭಾ ಸದಸ್ಯನಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…